ಧರ್ಮಸ್ಥಳ ಪರ ಹೋರಾಟ : ವೇದಿಕೆ ಏರಲು ಬಂದ ಸೌಜನ್ಯ ತಾಯಿ, ಪೊಲೀಸರಿಂದ ಪರಿಸ್ಥಿತಿ ಹತೋಟಿ

ಬೆಳ್ತಂಗಡಿ : ಸೌಜನ್ಯ ಹತ್ಯೆ ಮಾಡಿದ ಆರೋಪಿಯನ್ನು ಪತ್ತೆ ಹಚ್ಚಿ ಶಿಕ್ಷಿಸುವಂತೆ ಹಾಗೂ ಧರ್ಮಸ್ಥಳ ಕ್ಷೇತ್ರ ಮೇಲೆ ಮತ್ತು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಮೇಲಿನ ಆರೋಪವನ್ನು ಖಂಡಿಸಿ ಲಕ್ಷಾಂತರ ಭಕ್ತರು ಸೇರಿ ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದ ವತಿಯಿಂದ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಮುಂಭಾಗ ನಡೆಸಿದ ಸಮಾವೇಶದ ಬಳಿಕ ಉಜಿರೆ ಎಸ್.ಡಿ.ಎಂ. ಕಾಲೇಜು ಮುಂಭಾಗ ನಡೆದ ಹಕ್ಕೊತ್ತಾಯ ಸಭೆ ವೇಳೆ ಸೌಜನ್ಯ ಅವರ ತಾಯಿ ಹಾಗೂ ತಂಗಿಯರು ಭಾಗಿಯಾಗಿದ್ದಾರೆ.

ಪ್ರತಿಭಟನಾ ಸಮಾವೇಶಕ್ಕೆ ರಾಜ್ಯದ ವಿವಿಧ ಭಾಗದ ಭಕ್ತರು ಆಗಮಿಸಿ ಮಳೆಯ ಮಧ್ಯೆಯೇ ಡಾ.ಡಿ.ವೀರೇಂದ್ರ ಹೆಗ್ಗಡೆ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಜೈಕಾರ ಕೂಗುತ್ತ ಸೌಜನ್ಯಳಿಗೆ ನ್ಯಾಯ ಒದಗಿಸಬೇಕೆಂದು ಹೋರಾಟ ನಡೆಸಿದ್ದಾರೆ.

ಇನ್ನು ಸಮಾವೇಶದ ಹಕ್ಕೊತ್ತಾಯ ವೇದಿಕೆ ಸಮೀಪ ಸೌಜನ್ಯ ಅವರ ತಾಯಿ ಕುಸುಮಾವತಿ, ತಂಗಿಯರಾದ ಸೌಮ್ಯ, ಸೌಂದರ್ಯ, ಸೌಹಾರ್ದ, ತಮ್ಮ ಜಯರಾಮ ಹಾಗೂ ಅತ್ತೆ ಮಗಳು ಮಧುಶ್ರೀ ಸೌಜನ್ಯ ಫೋಟೋ ಹಿಡಿದು ಬಂದಿದ್ದರು.

ಸೌಜನ್ಯ ಹಾಗೂ ತಾಯಿಯರನ್ನು ಕಂಡು ಭಕ್ತರು ಘೋಷಣೆ‌ ಕೂಗಿದ್ದು, ಕ್ಷೇತ್ರದ ಪರ ಅಪಪ್ರಚಾರ ಮಾಡಿದವರಿಗೆ ತಕ್ಕ ಶಿಕ್ಷೆಯಾಗಲಿ ಎಂದು ಘೋಷಣೆ ಕೇಳಿಬಂತು. ಈ ವೇಳೆ ಸೌಜನ್ಯ ತಾಯಿ ವೇದಿಕೆ ಏರಲು ಅವಕಾಶ ಕಲ್ಪಿಸುವಂತೆ ಕೇಳಿಕೊಂಡರು, ಸಾವಿರಾರು ಮಂದಿ ಸೇರಿರುವುದರಿಂದ ಪರಿಸ್ಥಿತಿ ಹದಗೆಡಬಾರದೆಂದು ಪೊಲೀಸರು ತಕ್ಷಣ ಅವರ ಕುಟುಂಬಕ್ಕೆ ಭದ್ರತೆ ನೀಡಿದ್ದಾರೆ.

You cannot copy content from Baravanige News

Scroll to Top