ಧರ್ಮಸ್ಥಳ, ಆ.04: ಸೌಜನ್ಯ ಹತ್ಯೆ ಮಾಡಿದ ಆರೋಪಿಯನ್ನು ಪತ್ತೆ ಹಚ್ಚಿ ಶಿಕ್ಷಿಸುವಂತೆ ಹಾಗೂ ಧರ್ಮಸ್ಥಳ ಕ್ಷೇತ್ರದ ಮೇಲೆ ಮತ್ತು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಮೇಲಿನ ಆರೋಪವನ್ನು ಖಂಡಿಸಿ ಲಕ್ಷಾಂತರ ಭಕ್ತರು ಸೇರಿ ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದ ವತಿಯಿಂದ ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಮುಂಭಾಗ ಸಮಾವೇಶ ನಡೆದಿದ್ದು, ಈ ವೇಳೆ ಪ್ರತಿಭಟನೆಗೆ ಆಗಮಿಸಿದ ಸೌಜನ್ಯ ತಾಯಿಯನ್ನು ತಡೆದು ಕುಟುಂಬದವರಿಗೆ ಬೆದರಿಸಿದ ವ್ಯಕ್ತಿಯ ವಿರುದ್ಧ ಸೌಜನ್ಯ ತಾಯಿ ಕುಸುಮಾವತಿ ದೂರು ನೀಡಿದ್ದಾರೆ.
ಸೌಜನ್ಯ ಸುಮಾರು 11 ವರ್ಷಗಳ ಹಿಂದೆ
ಅತ್ಯಾಚಾರಕ್ಕೊಳಗಾಗಿ ಪತ್ತೆಯಾಗಿದ್ದು, ಅತ್ಯಾಚಾರ ಮಾಡಿ ಹತ್ಯೆ ಮಾಡಿರುವ ನೈಜ ಆರೋಪಿಗಳನ್ನು ಪತ್ತೆ ಹಚ್ಚಿ ಶಿಕ್ಷೆಗೊಳಪಡಿಸಲು ವರ್ಷದಿಂದ ಹೋರಾಟ ನಡೆಸುತ್ತಿದ್ದೇವೆ.
ಅದೇ ಉದ್ದೇಶದಿಂದ ಉಜಿರೆಯಲ್ಲಿ ಸಭೆಯೊಂದನ್ನು
ಆಯೋಜಿಸಿರುವುದನ್ನು ತಿಳಿದು ನ್ಯಾಯಕ್ಕಾಗಿ ಆಗ್ರಹಿಸಿ ಸದ್ರಿ ಸಭೆಗೆ ತನ್ನ ಕುಟುಂಬದೊಂದಿಗೆ ಬಂದಿದ್ದು ಆಗ ಸಮಯ ವ್ಯಕ್ತಿಯೊಬ್ಬನು ಇತರರೊಂದಿಗೆ ಸೇರಿಕೊಂಡು ತನ್ನನ್ನು ತಡೆದು ನಿಲ್ಲಿಸಿ ಮೈಗೆ ಕೈ ಹಾಕಿ ತಾನು ಧರಿಸಿದ ಚೂಡಿದಾರ ಹಿಡಿದೆಳೆದು ತನ್ನ ಮಾನಕ್ಕೆ ಕುಂದುಂಟು ಮಾಡಿದ್ದಲ್ಲದೆ, ತನ್ನ ಮಗನ ಮೇಲೆಯೂ ಹಲ್ಲೆಗೆ ಯತ್ನಿಸಿದ್ದು ಆರೋಪಿಗಳ ಮೇಲೆ ಸೂಕ್ತ ಕೈಕೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..