ಬೆಂಗಳೂರು : ಕರಾವಳಿಯ ಪ್ರಸಿದ್ದ ಜಾನಪದ ಕ್ರೀಡೆ ಕಂಬಳ ಕಂಪು ರಾಜಧಾನಿ ಬೆಂಗಳೂರಿಗೂ ಪಸರಿಸಲಿದೆ. ಬೆಂಗಳೂರು ಅರಮನೆ ಮೈದಾನದಲ್ಲಿ ಕಂಬಳ ಆಯೋಜಿಸುವ ಚಿಂತನೆ ನಡೆದಿದ್ದು, ಇದಕ್ಕೆ ಪೂರಕ ಸಿದ್ಧತೆಗಳು ಆರಂಭಗೊಂಡಿದೆ.
ರಾಜ್ಯ ರಾಜಧಾನಿಯಲ್ಲಿ ತುಳುಕೂಟದ ಸುವರ್ಣ ಸಂಭ್ರಮದ ಹಿನ್ನಲೆಯಲ್ಲಿ ಕಂಬಳಾ ಆಯೋಜನೆಗೆ ನಿರ್ಧರಿಸಲಾಗಿದೆ. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಪೂರಕ ಸಿದ್ಧತೆ ನಡೆಯುತ್ತಿದೆ.
ಕಂಬಳ ಕರೆಗೆ ರಾಜ ಮಹಾರಾಜ ‘ಜಯಚಾಮರಾಜೇಂದ್ರ ಒಡೆಯರ್ ಜೋಡುಕರೆ ಕಂಬಳ’ ಎಂದು ಹೆಸರಿಡಲು ತೀರ್ಮಾನಿಸಲಾಗಿದ್ದು, ಅರಮನೆ ಮೈದಾನದಲ್ಲಿ ಕಂಬಳ ಆಯೋಜನೆಗೆ ಮೈಸೂರು ರಾಜಮನೆತನದಿಂದ ಅನುಮತಿ ಪಡೆಯಲಾಗಿದೆ.
ಕಂಬಳದ ಎಲ್ಲ ವಿಭಾಗದ ಸ್ಪರ್ಧೆಗಳನ್ನು ಆಯೋಜಿಸಲು ನಿರ್ಧರಿಸಲಾಗಿದ್ದು, ಕೋಣಗಳನ್ನು ರೈಲಿನಲ್ಲಿ ಸಾಗಾಟ ಮಾಡುವ ಬಗ್ಗೆಯೂ ಚರ್ಚೆ ನಡೆದಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.