ಮೈಸೂರು, ಆ 07: ಮೈಸೂರು ಅರಮನೆಯ ಹೊರಾಂಗಣದಲ್ಲಿ ಡ್ರೋನ್ ಕ್ಯಾಮೆರಾ ಬಳಕೆಗೆ ನಿರ್ಬಂಧ ಹೇರಿ ಅರಮನೆ ಆಡಳಿತ ಮಂಡಳಿ ಆದೇಶ ಹೊರಡಿಸಿದೆ.
ಮೈಸೂರು ಅರಮನೆಯೂ ವಿಶ್ವ ವಿಖ್ಯಾತಿಯನ್ನು ಹೊಂದಿದ್ದು, ಅರಮನೆಯ ಸುತ್ತಮುತ್ತಲ ಪ್ರದೇಶವನ್ನು ‘ಹಳದಿ ವಲಯ’ ವೆಂದು ಘೋಷಿಸಲಾಗಿದೆ. ಆದ್ದರಿಂದ ಅರಮನೆಯ ಹೊರಾಂಗಣದಲ್ಲಿ ಡ್ರೋನ್ ಕ್ಯಾಮೆರಾ ಬಳಸುವುದನ್ನು ನಿರ್ಬಂಧಿಸಲಾಗಿದೆ. ಈ ಬಗ್ಗೆ ಅರಮನೆ ಮಂಡಳಿ ಉಪ ನಿರ್ದೇಶಕ ಟಿಎಸ್ ಸುಬ್ರಮಣ್ಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಒಂದು ವೇಳೆ ಈ ಪ್ರದೇಶದಲ್ಲಿ ಡ್ರೋನ್ ಕ್ಯಾಮೆರಾವನ್ನು ಬಳಸುವುದಾದರೆ ಮೈಸೂರು ಅರಮನೆ ಮಂಡಳಿಯಿಂದ ಪೂರ್ವಾನುಮತಿ ಪಡೆಯಬೇಕು. ಅನುಮತಿ ಪಡೆಯದೆ ಅನಧಿಕೃತವಾಗಿ ಡ್ರೋನ್ ಹಾರಾಟ ಮಾಡಿದಲ್ಲಿ ಅಂತವರ ವಿರುದ್ಧ ಕಾನುನೂ ನಿಯಮಾನುಸಾರ ಕ್ರಮಕೈಗೊಳ್ಳಲಾಗುತ್ತದೆ.