ಉಡುಪಿ : ಮಗಳೊಂದಿಗೆ ನಾಪತ್ತೆಯಾದ ತಾಯಿ…!!

ಉಡುಪಿ : ನಗರದ ನಯಂಪಳ್ಳಿ ನಿವಾಸಿ ಅಕ್ಷತಾ (32) ಎಂಬ ಮಹಿಳೆಯು ತನ್ನ ಮಗಳಾದ ಖುಷಿ (9) ಯೊಂದಿಗೆ ಏಪ್ರಿಲ್ 30 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.


ಅಕ್ಷತಾ 5 ಅಡಿ 4 ಇಂಚು ಎತ್ತರ, ಸಾಧಾರಣ ಶರೀರ, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ, ಹಿಂದಿ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಖುಷಿ 4 ಅಡಿ 2 ಇಂಚು ಎತ್ತರ, ಸಾಧಾರಣ ಶರೀರ, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ, ಇಂಗ್ಲೀಷ್ ಹಾಗೂ ತುಳು ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

You cannot copy content from Baravanige News

Scroll to Top