ಶಾಲೆಯಲ್ಲಿ ಕುಸಿದು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಮೃತ್ಯು

ಚಾಮರಾಜನಗರ, ಆ 09: ಎಸ್ಎಸ್ ಎಲ್ ಸಿ ವಿದ್ಯಾರ್ಥಿನಿಯೋರ್ವಳು ರಾಷ್ಟ್ರಗೀತೆ ಹಾಡುವಾಗ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ಪಟ್ಟಣದ ಸಿಎಂಎಸ್ ಅನಾಥಾಲಯದಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.

ಪಟ್ಟಣದ ನಿರ್ಮಲ ಕಾನ್ವೆಂಟ್ ನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಫಿಲಿಶ್(15) ಮೃತ ದುರ್ದೈವಿ. ಶಾಲೆಯಲ್ಲಿ ರಾಷ್ಟ್ರಗೀತೆ ಹಾಡುವಾಗ ಪೆಲಿಸಾ ಏಕಾಏಕಿ ಕುಸಿದುಬಿದ್ದಿದ್ದಾಳೆ. ಕೂಡಲೇ ಶಾಲಾ ಸಿಬ್ಬಂದಿ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ದುರದೃಷ್ಟವಶಾತ್ ಅಷ್ಟರಾಗಲೇ ಜೀವ ನಿಂತು ಹೋಗಿತ್ತು.

ಫಿಲಿಶ್ ಮೂಲತಃ ಬೆಂಗಳೂರಿನ ನಿವಾಸಿಯಾಗಿದ್ದು, ಹೆತ್ತವರನ್ನು ಕಳೆದುಕೊಂಡಿದ್ದರು ಎನ್ನಲಾಗಿದೆ. ಕಳೆದ ಐದಾರು ವರ್ಷಗಳ ಹಿಂದೆ ಸಿಎಂಎಸ್ ಅನಾಥಾಲಯಕ್ಕೆ ಇವರು ಸೇರ್ಪಡೆಗೊಂಡಿದ್ದರು ಎಂದು ನಿಲಯ ಪಾಲಕರಾದ ಸೆಲ್ವರಾಜ್ ಮಾಹಿತಿ ನೀಡಿದ್ದಾರೆ. ಬಾಲಕಿ ಆರೋಗ್ಯವಾಗಿದ್ದು ಧಿಡೀರ್ ಕುಸಿದು ಬಿದ್ದು ಹೃದಯಾಘಾತವಾಗಿರುವುದು ನಮಗೆಲ್ಲರಿಗೂ ಆಘಾತವಾಗಿದೆ‌ ಎಂದು ತಿಳಿಸಿದ್ದಾರೆ.

Scroll to Top