ನಟಿ ಜಯಪ್ರದಾಗೆ 6 ತಿಂಗಳು ಜೈಲು ಶಿಕ್ಷೆ, 5 ಸಾವಿರ ರೂ. ದಂಡ – ಏನಿದು ಪ್ರಕರಣ..!??

ಹೈದರಾಬಾದ್ : ನಟಿ ಜಯಪ್ರದಾ ಅವರು ನಡೆಸುತ್ತಿದ್ದ ಚಿತ್ರಮಂದಿರದ ಕೆಲಸಗಾರರಿಗೆ ಸೂಕ್ತ ಇಎಸ್ಐ ಹಣ ನೀಡಿಲ್ಲ ಎಂದು ಕೇಸ್ ದಾಖಲಾಗಿದ್ದು, ಅವರಿಗೆ ನ್ಯಾಯಾಲಯವು 6 ತಿಂಗಳು ಜೈಲು ಶಿಕ್ಷೆ, 5 ಸಾವಿರ ರೂಪಾಯಿ ದಂಡ ವಿಧಿಸಿದೆ.


ಜಯಪ್ರದಾ ಅವರು ನಡೆಸುತ್ತಿದ್ದ ಚಿತ್ರಮಂದಿರದ ಕೆಲಸಗಾರರಿಗೆ ಸೂಕ್ತ ಇಎಸ್ಐ ಹಣ ನೀಡಿಲ್ಲ ಎಂದು ಕೇಸ್ ದಾಖಲಾಗಿದ್ದು, ಅದರ ವಿಚಾರಣೆ ನಡೆಸಿರುವ ನ್ಯಾಯಾಲಯವು ಈ ತೀರ್ಪು ನೀಡಿದೆ.

ಇನ್ನು ಇಎಸ್ಐ ಹಣ ಪಾವತಿಸದ ಕಾರಣ ಜಯಪ್ರದಾ ವಿರುದ್ಧ ಕಾರ್ಮಿಕರು ಅಸಮಾಧಾನಗೊಂಡಿದ್ದರು. ಈ ಹಿಂದೆ ಕೂಡ ಜಯಪ್ರದಾ ಥಿಯೇಟರ್ ಕಾಂಪ್ಲೆಕ್ಸ್ಗೆ ಸಂಬಂಧಿಸಿದಂತೆ ಸುಮಾರು 20 ಲಕ್ಷ ರೂಪಾಯಿ ತೆರಿಗೆ ಪಾವತಿಸಿರಲಿಲ್ಲ. ಆಗ ಸಿಟಿ ಸಿವಿಲ್ ನ್ಯಾಯಾಲಯದ ಆದೇಶದಂತೆ ಪಾಲಿಕೆ ಅಧಿಕಾರಿಗಳು ಥಿಯೇಟರ್ನ ಕುರ್ಚಿ, ಪ್ರೊಜೆಕ್ಟರ್ಗಳನ್ನು ಜಪ್ತಿ ಮಾಡಿದ್ದರು.

You cannot copy content from Baravanige News

Scroll to Top