ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ‘ಪ್ರಗತಿಪರ ಅಭಿವೃದ್ಧಿಗಾಗಿ ನುಡಿದಂತೆ ನಡೆದಿದ್ದೇವೆ’ ಹೆಸರಿನ ಕಿರು ಸ್ಮರಣಿಕೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಬಿಡುಗಡೆಗೊಳಿಸಿದರು.
ಈ ವೇಳೆ ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ ಹಾಕೆ, ಜಿಲ್ಲಾ ಪಂಚಾಯತ್ ಸಿಇಒ ಎಚ್. ಪ್ರಸನ್ನ, ಅಪರ ಜಿಲ್ಲಾಧಿಕಾರಿ ಮಮತಾ ಕೆ.ಜಿ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್, ಉಪಸ್ಥಿತರಿದ್ದರು.