ಬಿಗ್ ಬಾಸ್ ಸ್ಪರ್ಧಿಯಾಗಿದ್ದ ಕಿರಿಕ್ ಕೀರ್ತಿ ಮಹತ್ವದ ಘೋಷಣೆ ಮಾಡಿದ್ದಾರೆ. ತಮ್ಮ ವೈವಾಹಿಕ ಜೀವನ ಮುಕ್ತಾಯಗೊಂಡಿರುವುದನ್ನು ಬಹಿರಂಗಪಡಿಸಿದ್ದಾರೆ.
‘ಬಿಗ್ ಬಾಸ್’ ಸೀಸನ್ 4, ‘ಜೋಡಿ ನಂಬರ್ 1’ ರಿಯಾಲಿಟಿ ಶೋಗಳಲ್ಲಿ ಸ್ಪರ್ಧಿಯಾಗಿದ್ದ ನಟ ಹಾಗೂ ನಿರೂಪಕ ಕಿರಿಕ್ ಕೀರ್ತಿ ಪತ್ನಿಯಿಂದ ವಿಚ್ಛೇದನ ಪಡೆದುಕೊಂಡಿರುವ ಬಗ್ಗೆ ಬಹಿರಂಗ ಪಡಿಸಿದ್ದಾರೆ.
ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕಿರುವ ಕೀರ್ತಿ, ಕಾನೂನಿನ ಪ್ರಕಾರ ಇವತ್ತು ನನ್ನ ಮತ್ತು ಅರ್ಪಿತಾ ಜೊತೆಗಿನ ಪತಿ-ಪತ್ನಿಯ ಸಂಬಂಧಕ್ಕೆ ಪೂರ್ಣ ವಿರಾಮ ಸಿಕ್ಕಿದೆ.
ಇನ್ನು ಮುಂದೆ ನನ್ನ ವೈಯಕ್ತಿಕ, ವ್ಯವಹಾರಿಕ ವಿಚಾರಗಳಿಗೂ ಅವಳಿಗೂ ಯಾವುದೇ ಸಂಬಂಧ ಇರುವುದಿಲ್ಲ. ಕಾರಣ ಇಷ್ಟೇ, ಅಧಿಕೃತವಾಗಿ ಇನ್ನು ಮುಂದೆ ಕರಿಮಣಿ ಮಾಲೀಕ ನಾನಲ್ಲ. ಒಂದೊಳ್ಳೆಯ ಬದುಕು ಅವಳಿಗೂ ಸಿಗಲಿ. ಕಹಿ ನೆನಪುಗಳು ಮರೆತು ಹೊಸ ಜೀವನಕ್ಕೆ ನಾಂದಿ ಹಾಡಲಿ. ನನಗೂ ನಿಮ್ಮ ಪ್ರೀತಿ ಹಾರೈಕೆ ಮುಂದುವರೆಯಲಿ ಎಂದು ಕಿರಿಕ್ ಕೀರ್ತಿ ಪೋಸ್ಟ್ ಹಾಕಿದ್ದಾರೆ.
ಈ ಪೋಸ್ಟ್ ಗೆ ಅವರು ‘ಸಕಲವೂ ಸನ್ಮಂಗಳವಾಗಲಿ’ ಎಂದು ಕ್ಯಾಪ್ಶನ್ ಸಹ ಬರೆದಿದ್ದಾರೆ. ತಮ್ಮ ಮತ್ತೊಂದು ಪೋಸ್ಟ್ ನಲ್ಲಿ ಅವರು ಪುತ್ರನ ಜೊತೆಗಿರುವ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಈ ಹಿಂದೆ ಕೆಲ ಕಾರಣಗಳಿಂದ ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಯತ್ನಿಸಿದ್ದೆ ಅನ್ನೋ ಮಾಹಿತಿಯನ್ನು ಕಿರಿಕ್ ಕೀರ್ತಿ ತಿಳಿಸಿದ್ದರು.