BREAKING NEWS
ಉಡುಪಿ : ಉಡುಪಿಯಲ್ಲಿ ಪಿಎಫ್ಐ ನಿಂದ ದಿಢೀರ್ ಪ್ರತಿಭಟನೆ – ಲಘು ಲಾಠಿ ಪ್ರಹಾರ

ಉಡುಪಿ : ಪಿಎಫ್ಐ ನಾಯಕರ ಮನೆ ಹಾಗೂ ಕಚೇರಿ ಮೇಲೆ ನಡೆದಿರುವ ಎನ್ಐಎ ದಾಳಿ ಖಂಡಿಸಿ ಪಿಎಫ್ಐ ಕಾರ್ಯಕರ್ತರು ಉಡುಪಿ ನಗರದಲ್ಲಿ ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿದರು.
ಕೋರ್ಟ್ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಎನ್ಐಎ ಗೋ ಬ್ಯಾಕ್ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪಿಎಫ್ಐ ಕಾರ್ಯಕರ್ತರ ಪ್ರತಿಭಟನೆ ಹಿನ್ನೆಲೆಯಲ್ಲಿ ನಗರದಲ್ಲಿ ವಾಹನ ಸಂಚಾರಕ್ಕೆ ತೊಡಕುಂಟಾಗಿದ್ದು ಪೋಲಿಸರು ಗುಂಪು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಿ ಕಾರ್ಯಕರ್ತರನ್ನು ವಶಕ್ಕೆ ಪಡೆದರು.
ಇಂದು ಬೆಳಗ್ಗೆ ಮಂಗಳೂರು ಸೇರಿದಂತೆ ಹಲವೆಡೆ ಪಿಎಫ್ಐ ಮತ್ತು ಎಸ್ ಡಿ ಪಿ ಐ ಕಚೇರಿಗಳ ಮೇಲೆ ಎನ್ಐಎ ದಾಳಿ ನಡೆಸಿತ್ತು. ಈ ಹಿನ್ನೆಲೆಯಲ್ಲಿ ಪಿಎಫ್ಐ ಕಾರ್ಯಕರ್ತರು ಹಲವು ಕಡೆಗಳಲ್ಲಿ ಪ್ರತಿಭಟನೆ ನಡೆಸಿದ್ದಾರೆ.

You cannot copy content from Baravanige News

Scroll to Top