ಪುತ್ತೂರು, ಆ.24: ಯುವತಿಯೋರ್ವಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಹಿಂಭಾಗದಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಹಿಂಭಾಗದ ಮಹಿಳಾ ಪೊಲೀಸ್ ಠಾಣೆಯ ಬಳಿ ಯುವಕನೋರ್ವ ಯುವತಿಯ ಕುತ್ತಿಗೆಗೆ ಚಾಕು ಇರಿದು ಕೊಲೆ ಯತ್ನ ನಡೆಸಿದ್ದು, ಗಂಭೀರ ಗಾಯಗೊಂಡ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಗಂಭೀರ ಗಾಯಗೊಂಡ ಯುವತಿಯನ್ನು ವಿಟ್ಲ ಮೂಲದ ಗೌರಿ (20) ಎನ್ನಲಾಗುತ್ತಿದ್ದು, ಕೊಲೆಗೆ ಯತ್ನಿಸಿದ ಯುವಕ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ.
ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.