ತಮಿಳುನಾಡಿನ ಕೃಷ್ಣಗಿರಿಯಲ್ಲಿ ಪತಿಯೊಬ್ಬ ಯೂಟ್ಯೂಬ್ ನೋಡಿ ಹೆರಿಗೆ ಮಾಡಿಸಲು ಹೋದ ಕಾರಣ ತೀವ್ರ ರಕ್ತಸ್ರಾವವಾಗಿ ಪತ್ನಿ ಮೃತಪಟ್ಟಿರುವ ಘಟನೆ ನಡೆದಿದೆ.
ಪೋಚಂಪಲ್ಲಿ ಸಮೀಪದ ಪುಲಿಯಂಪಟ್ಟಿ ನಿವಾಸಿ (27) ಲೋಗನಾಯಕಿ ಮೃತ ಮಹಿಳೆ.
ಲೋಗನಾಯಕಿ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಈ ವೇಳೆ ಪತಿ ಮಾದೇಶ್ ಯೂಟ್ಯೂಬ್ ನೋಡಿಕೊಂಡು ಹೆರಿಗೆ ಮಾಡಿಸುವ ವಿಧಾನವನ್ನು ಅನುಸರಿಸಿದ್ದಾರೆ. ನೈಸರ್ಗಿಕವಾಗಿ ಹೆರಿಗೆಗೆ ಪ್ರಯತ್ನಿಸಿದ ವೇಳೆ ತೀವ್ರ ರಕ್ತಸ್ರಾವವಾಗಿ ಪತ್ನಿ ಮೃತಪಟ್ಟಿದ್ದಾರೆ.
ಕರುಳು ಬಳ್ಳಿಯನ್ನು ಸರಿಯಾಗಿ ಕತ್ತರಿಸದ ಕಾರಣ ತೀವ್ರ ರಕ್ತಸ್ರಾವ ಉಂಟಾಗಿದೆ. ಆ ಬಳಿಕ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಆಕೆಯನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಲಾಗಿದೆ. ಆದರೆ ಆದಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ.