ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ..!!!

ರಾಯಚೂರು : ಕಿತ್ತೂರುರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ರಾಯಚೂರು ಜಿಲ್ಲೆಯ ಗುರುವಾರ ನಡೆದಿದೆ.

ಜಿಲ್ಲೆಯ ದೇವದುರ್ಗ ಪಟ್ಟಣದಲ್ಲಿ ಕಿತ್ತೂರುರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿದ್ದ ವಿದ್ಯಾರ್ಥಿನಿ‌ ಪವಿತ್ರಾ(15) ಮೃತಪಟ್ಟಿರುವ ವಿದ್ಯಾರ್ಥಿನಿಯೆಂದು ಗುರುತಿಸಲಾಗಿದೆ.

ದೇವದುರ್ಗ ತಾಲೂಕಿನ ಬೋಗಿರಾಮನಗುಂಡ ಗ್ರಾಮದ ನಿವಾಸಿ ಯಾಗಿದ್ದು, ೧೦ನೇ ತರಗತಿಯಲ್ಲಿ‌ ವಿದ್ಯಾಬ್ಯಾಸ ಮಾಡುತ್ತಿದ್ದ ಮಾಡುವುದಕ್ಕಾಗಿ ಕಿತ್ತೂರುರಾಣಿ ಚನ್ನಮ್ಮ ವಸತಿಯಲ್ಲಿ ಶಾಲೆಯಲ್ಲಿ ಇದ್ದಳು. ಆದರೆ ನಿನ್ನೆಯ ದಿನ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗುತ್ತಿದೆ.

ಘಟನಾ ವಿಷಯ ತಿಳಿದು  ಸ್ಥಳಕ್ಕೆ ಡಿಎಸ್ಪಿ ಮಂಜುನಾಥ, ಜಿಲ್ಲಾ ಪರಿಶಿಷ್ಟ ಪಂಗಡ ಅಧಿಕಾರಿ ರಾಜೇಂದ್ರ ಜಲ್ದರ್, ಗ್ರಾಮೀಣ ಸಿ ಪಿ ಐ ಗುಂಡೂರಾವ, ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ, ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇತ್ತ ಮಗಳನ್ನು ಕಳೆದುಕೊಂಡು‌ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ವಸತಿ ನಿಲಯದ ಇತರೆ ವಿದ್ಯಾರ್ಥಿನಿಯರು ಆತಂಕಗೊಂಡಿದ್ದರು.

You cannot copy content from Baravanige News

Scroll to Top