ಕಾಂಗ್ರೆಸ್ ಕಾರ್ಯಕರ್ತೆ ವಿರುದ್ಧ ಅವಹೇಳನಕಾರಿ ಪೋಸ್ಟ್ ; ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್ಐಆರ್ ದಾಖಲು

ಶಿವಮೊಗ್ಗ : ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಕಮೆಂಟ್‌ ಮಾಡಿದ ಆರೋಪದಡಿ ಚಿಂತಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಿವಮೊಗ್ಗದ ವಿನೋಬ ನಗರ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಸೂಲಿಬೆಲೆ ಅವಹೇಳನಾರಿ ಕಮೆಂಟ್‌ ಮಾಡಿದ್ದಾರೆ ಎಂದು ಆರೋಪಿಸಿ ಆ.24ರಂದು ಕಾಂಗ್ರೆಸ್‌ನ ಸಾಮಾಜಿಕ ಜಾಲತಾಣದ ಸಂಚಾಲಕಿ ಸೌಗಂಧಿಕಾ ರಘುನಾಥ್‌ ದೂರು ನೀಡಿದ್ದರು. ಇದೀಗ ಐಪಿಸಿ ಸೆಕ್ಷನ್‌ 504 ಹಾಗೂ 509 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಎಲ್ಲರೂ ದೇವಸ್ಥಾನಗಳಿಗೆ ಹೋಗಿ ಕೈಮುಗಿದು ಚಂದ್ರಯಾನ 3 ಯಶಸ್ವಿಯಾಗಲಿ, ಫೋಟೋಗಳನ್ನ ಹಾಕಿ ಎಂದು ಚಕ್ರವರ್ತಿ ಸೂಲಿಬೆಲೆ ಪೋಸ್ಟ್ ಮಾಡಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ, ದೇವಸ್ಥಾನಕ್ಕೆ ಪೂಜೆ ಮಾಡೋದು ತಪ್ಪಲ್ಲ. ಆದರೆ ಫೊಟೋ ಹಾಕಿ ಅಂತ ಹೇಳಿರೋದು ತಪ್ಪು. ವಿಜ್ಞಾನಿಗಳ ಪರಿಶ್ರಮ ಫಲಿಸಲಿ ಎಂದು ಬೇಡಿಕೊಂಡರೆ ಸಾಕು ಎಂದು ಸೌಗಂಧಿಕಾ ಕಾಮೆಂಟ್ ಮಾಡಿದ್ದರು.

ಇದಕ್ಕೆ ಚಕ್ರವರ್ತಿ ಸೂಲಿಬೆಲೆ, “ನಿನಗೆ ಎಲ್ಲಿ ಯಾಕೆ ಉರಿ ಬಂತೋ ಗೊತ್ತಿಲ್ಲ” ಎಂದು ಕಾಮೆಂಟ್ ಹಾಕಿದ್ದರು. ಈ ಕಾರಣಕ್ಕೆ ಫೇಸ್ಬುಕ್ನಲ್ಲಿ ಅವಾಚ್ಯವಾಗಿ ಕಾಮೆಂಟ್ ಹಾಕಿದ್ದಾರೆ ಎಂದು ಸೌಗಂಧಿಕಾ ರಘುನಾಥ್ ಆರೋಪಿಸಿದ್ದಾರೆ.

You cannot copy content from Baravanige News

Scroll to Top