‘ಗೃಹಲಕ್ಷ್ಮಿ’ ಯೋಜನೆಯ ಚಾಲನಾ ಸಮಾರಂಭದ ಹಿನ್ನೆಲೆ ಪೂರ್ವಭಾವಿ ಸಭೆ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭಾಗಿ

ಮೈಸೂರು : ಆಗಸ್ಟ್ 30 ರಂದು ಮೈಸೂರಿನಲ್ಲಿ ನಡೆಯಲಿರುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯ ಚಾಲನಾ ಸಮಾರಂಭದ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಚಾಮರಾಜನಗರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡರು.



ಜಿಲ್ಲಾ ಆಡಳಿತ ಭವನ ಆವರಣದಲ್ಲಿರುವ ವರನಟ ಡಾ.ರಾಜ್ ಕುಮಾರ್ ರಂಗಮಂದಿರದಲ್ಲಿ ನಡೆದ ಸಮಾರಂಭದಲ್ಲಿ ನೂರಾರು ಸಂಖ್ಯೆಯಲ್ಲಿ ಅಂಗನವಾಡಿ, ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.



ಈ ವೇಳೆ ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿ, ಗುಂಡ್ಲುಪೇಟೆ ಶಾಸಕ ಗಣೇಶ್ ಪ್ರಸಾದ್, ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

You cannot copy content from Baravanige News

Scroll to Top