ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ; ಎಲ್‌ಪಿಜಿ ಸಿಲಿಂಡರ್‌ ದರ ಇಳಿಕೆ

ನವದೆಹಲಿ, ಆ 29: ದೇಶದ ಜನತೆಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದ್ದು, 14 ಕೆಜಿ ಎಲ್‌ಪಿಜಿ ಸಿಲಿಂಡರ್‌ಗೆ 200 ರೂ ಸಬ್ಸಿಡಿ ನೀಡುವುದಾಗಿ ಘೋಷಿಸಿದೆ. ಮಂಗಳವಾರ ಕೇಂದ್ರ ಕ್ಯಾಬಿನೆಟ್‌ ಸಭೆ ನಡೆಸಿ ಈ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದು ವರದಿಯಾಗಿದೆ.

ಈ ಸಬ್ಸಿಡಿ ಹಣ ನೇರವಾಗಿ ಗ್ರಾಹಕರ ಖಾತೆಗೆ ವರ್ಗಾವಣೆಯಾಗುವುದಿಲ್ಲ. ಬದಲಾಗಿ ಸರ್ಕಾರಿ ಸ್ವಾಮ್ಯದ ಇಂಡಿಯನ್‌ ಆಯಿಲ್‌, ಹಿಂದೂಸ್ತಾನ ಪೆಟ್ರೋಲಿಯಂ ಕಾರ್ಪೋರೇಷನ್‌ ಮತ್ತು ಭಾರತ್‌ ಪೆಟ್ರೋಲಿಯಂ ಕಾರ್ಪೋರೇಷನ್‌ ಕಂಪನಿಗಳಿಗೆ ಸಬ್ಸಿಡಿ ಹಣ ಸಿಗಲಿದೆ.

ತೈಲ ಕಂಪನಿಗಳಿಗೆ ನೇರವಾಗಿ ಪಾವತಿಯಾಗುವ ಕಾರಣ ಖರೀದಿಸುವಾಗಲೇ 200 ರೂ. ಕಡಿತಗೊಳ್ಳಲಿದೆ. ಪ್ರಸ್ತುತ ಬೆಂಗಳೂರಿನಲ್ಲಿ 14 ಕೆಜಿ ಎಲ್‌ಪಿಜಿಗೆ 1100 ರೂ. ಇದೆ. ಇನ್ನು ಮುಂದೆ 900 ರೂ.ಗೆ ಗ್ಯಾಸ್ ಸಿಲಿಂಡರ್‌ ಸಿಗಲಿದೆ.

ರಾಜಸ್ಥಾನ, ಛತ್ತೀಸ್‌ಗಢ, ಮಧ್ಯಪ್ರದೇಶ, ತೆಲಂಗಾಣ, ಮಿಜೋರಾಂನಲ್ಲಿ ಚುನಾವಣೆ ಘೋಷಣೆಗೂ ಮುನ್ನವೇ ಕೇಂದ್ರದಿಂದ ಈ ಮಹತ್ವದ ನಿರ್ಧಾರ ಪ್ರಕಟವಾಗಿದೆ.

You cannot copy content from Baravanige News

Scroll to Top