ಕಾಪು ತಾಲೂಕು ಆಡಳಿತ ಸೌಧದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಜಯಂತಿ ಆಚರಣೆ

ಉಡುಪಿ : ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಜಯಂತಿ ಆಚರಣೆ ಇಂದು ದಿನಾಂಕ 31-08-2023 ರಂದು ಕಾಪು ತಾಲ್ಲೂಕು ಆಡಳಿತ ಸೌಧದಲ್ಲಿರುವ ಶಾಸಕರ ಕಚೇರಿಯಲ್ಲಿ ನಡೆಯಿತು.



ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜನಪ್ರತಿನಿಧಿಗಳು, ಪಕ್ಷದ ಹಿರಿಯರು, ಪ್ರಮುಖರು, ಮುಖಂಡರು, ಕಾರ್ಯಕರ್ತರು ಮತ್ತು ಬಿಲ್ಲವ ಸಮಾಜದ ಮುಖಂಡರು ಉಪಸ್ಥಿತರಿದ್ದರು.

Scroll to Top