ಶ್ರೀಹರಿಕೋಟ : ದೇಶದ ಮಹತ್ಮಾಕಾಂಕ್ಷೆಯ ಚಂದ್ರಯಾನ 3 ರ ಉಡಾವಣೆ ಸಂದರ್ಭದ ಸಮಯ ಕ್ಷಣಗಣೆನೆಗೆ ಧ್ವನಿಯಾಗಿದ್ದ ಮಹಿಳಾ ವಿಜ್ಞಾನಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವಿಜ್ಞಾನಿ ವಲರ್ಮತಿ ಅವರು ಹೃದಯಾಘಾತದಿಂದ ಶನಿವಾರ ಮೃತಪಟ್ಟಿದ್ದಾರೆ.
ಮೂಲತಃ ತಮಿಳುನಾಡಿನ ಅರಿಯಾಲೂರ್‌ನವರಾದ ಇವರು, ದೇಶದ ಮೂರನೇ ಚಂದ್ರಯಾನ-3ರ ಉಡಾವಣೆಯಲ್ಲಿ ಹಿನ್ನೆಲೆ ಧ್ವನಿ ನೀಡಿದ್ದರು.
ಇಸ್ರೊ ಮಾಜಿ ನಿರ್ದೇಶಕ ಪಿ.ವಿ ವೆಂಕಟಕೃಷ್ಣನ್ ಅವರು ಟ್ವಿಟರ್ ಖಾತೆಯಲ್ಲಿ, ‘ಶ್ರೀಹರಿಕೋಟಾದಿಂದ ಇಸ್ರೊ ಭವಿಷ್ಯದ ಮಿಷನ್‌ಗಳ ಕ್ಷಣಗಣನೆಗೆ ವಲರ್ಮತಿ ಮೇಡಂ ಅವರ ಧ್ವನಿ ಇರುವುದಿಲ್ಲ. ಚಂದ್ರಯಾನ-3ರ ಅಂತಿಮ ಕ್ಷಣಗಣನೆ ಅವರ ಕೊನೆಯ ಘೋಷಣೆಯಾಗಿತ್ತು. ಅನಿರೀಕ್ಷಿತ ನಿಧನ. ತುಂಬಾ ದುಃಖವಾಗುತ್ತಿದೆ. ಪ್ರಣಾಮಗಳು’ ಎಂದು ಬರೆದುಕೊಂಡಿದ್ದಾರೆ.
31 ಜುಲೈ 1959 ರಂದು ಜನಿಸಿದ ವಲರ್ಮತಿ ಅವರು 1984 ರಲ್ಲಿ ಇಸ್ರೋಗೆ ಸೇರಿ, ಹಲವಾರು ಕಾರ್ಯಾಚರಣೆಗಳಲ್ಲಿ ಭಾಗವಹಿಸಿದರು.