ಸನಾತನ ಧರ್ಮ ಮತ್ತು ಸಂಸ್ಕೃತಿಯನ್ನು ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲ – ಕೇಮಾರು ಶ್ರೀ

ಉಡುಪಿ : ತಮಿಳುನಾಡು ಸಚಿವ ಉದಯ ನಿಧಿ ಸ್ಟಾಲಿನ್ ಹೇಳಿಕೆಯನ್ನು ಸಾಂದೀಪನಿ ಸಾಧನಾಶ್ರಮ ಶ್ರೀ ಕ್ಷೇತ್ರ ಕೇಮಾರು ಶ್ರೀ ಈಶ ವಿಠಲದಾಸ ಸ್ವಾಮೀಜಿ ಯವರು ತೀವ್ರವಾಗಿ ಖಂಡಿಸಿದ್ದಾರೆ.

ಸನಾತನ ಸಂಸ್ಕೃತಿಯ ರಕ್ಷಣೆ ನಮ್ಮ ಮೊದಲ ಆದ್ಯತೆಯಾಗಬೇಕು. ಸನಾತನ ಸಂಸ್ಕೃತಿ ಹಾಗೂ ಧರ್ಮದ ರಕ್ಷಣೆಗಾಗಿ ಲಕ್ಷೋಪಲಕ್ಷ ಸಾಧು ಸಂತರು ತಪಸ್ಸಿನ ಮೂಲಕ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದಾರೆ. ಸನಾತನ ಪರಂಪರೆ, ಸಂಸ್ಕೃತಿಯನ್ನು ವಿಶ್ವದ ಎಲ್ಲೆಡೆ ಪಸರಿಸುವ ಕೆಲಸವನ್ನು ಮಾಡಿದ್ದಾರೆ.

ಈ ಮಣ್ಣಿನ ಮೂಲ ಧರ್ಮ, ಸಂಸ್ಕೃತಿ, ಜೀವನ ವಿಧಾನವನ್ನು ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದರು .

ಬಾಲ್ಯದಿಂದಲೇ ಮಕ್ಕಳಿಗೆ ಸನಾತನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದನ್ನು ಕಲಿಸಬೇಕು ಎಂದು ಹೇಳಿದರು.

You cannot copy content from Baravanige News

Scroll to Top