ಚಿಕ್ಕಮಗಳೂರು: ನಗರದ ಸರ್ಕಾರಿ ಬಸ್ ನಿಲ್ದಾಣದ ಬಳಿ ಹಿಟ್ ಆ್ಯಂಡ್ ರನ್ ಆಕ್ಸಿಡೆಂಟ್ ನಡೆದಿದ್ದು, ಕಾರು ಸವಾರ ಬೈಕಿಗೆ ಗುದ್ದಿ ಎಸ್ಕೇಪ್ ಆಗಿದ್ದಾನೆ. ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಬೈಕ್ಗೆ ಗುದ್ದಿ ಪರಾರಿಯಾದ ಕಾರು ಕಾಮಿಡಿ ನಟನದ್ದು ಎಂದು ಹೇಳಲಾಗಿದೆ.
KA 51 MD 9552 ರಿಜಿಸ್ಟ್ರೇಷನ್ ನಂಬರ್ ಹೊಂದಿರುವ ಕಾರು ಇದಾಗಿದ್ದು, ಗಿಚ್ಚಿ ಗಿಲಿ-ಗಿಲಿ ಕಾಮಿಡಿ ಶೋ ನಟ ಚಂದ್ರಪ್ರಭಗೆ ಸೇರಿದ ಕಾರು ಎಂದು ಹೇಳಲಾಗುತ್ತಿದೆ.
ಅಪಘಾತ ಮಾಡಿ ಮಾನವೀಯತೆಗೂ ಕಾರು ನಿಲ್ಲಿಸದೆ ಸವಾರ ಎಸ್ಕೇಪ್ ಆಗಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇನ್ನು ಅಪಘಾತದಲ್ಲಿ ಬೈಕ್ ಸವಾರ ಮಾಲ್ತೇಶ್ ಗಂಭೀರವಾಗಿ ಗಾಯಗೊಂಡಿದ್ದಾನೆ.
ಮಾಲ್ತೇಶ್ ಚಿಕ್ಕಮಗಳೂರು ತಾಲೂಕಿನ ನಾಗೇನಹಳ್ಳಿ ನಿವಾಸಿಯಾಗಿದ್ದು, ಕೆಲಸ ಮುಗಿಸಿ ಮನೆಗೆ ಹೋಗುವಾಗ ಈ ಅಪಘಾತ ಸಂಭವಿಸಿದೆ. ಹೆಚ್ಚಿನ ಚಿಕಿತ್ಸೆಗಾಗಿ ಗಾಯಾಳು ಮಾಲ್ತೇಶ್ನನ್ನು ಹಾಸನಕ್ಕೆ ರವಾನಿಸಲಾಗಿದೆ. ಆತನ ಸಂಬಂಧಿಕರು ಕಾರು ಸವಾರನ ವಿರುದ್ಧ ಚಿಕ್ಕಮಗಳೂರು ನಗರದ ಟ್ರಾಫಿಕ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.