ಬೆಂಗಳೂರು : ಮುಂಬರುವ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಕಾ ಆಗಿದೆ. ಈ ಮೈತ್ರಿಯನ್ನ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರೇ ಖಚಿತಪಡಿಸಿದ್ದಾರೆ.
ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಸಂತೋಷ ತಂದಿದೆ.
ಜೆಡಿಎಸ್‌ಗೆ ನಾಲ್ಕು ಲೋಕಸಭಾ ಕ್ಷೇತ್ರವನ್ನು ಬಿಟ್ಟು ಕೊಡಲು ಕೇಂದ್ರ ಗೃಹಸಚಿವ ಅಮಿತ್ ಶಾ ಒಪ್ಪಿಕೊಂಡಿದ್ದಾರೆ. ಮೈತ್ರಿಯಿಂದ ನಮಗೆ ಶಕ್ತಿ ಬಂದಿದೆ ಎಂದು ಆತ್ಮವಿಶ್ವಾಸದಲ್ಲಿ ಹೇಳಿದ್ದಾರೆ.
ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ರಹಸ್ಯವಾಗಿ ಭೇಟಿಯಾಗಿದ್ದಾರೆ. ಅಮಿತ್ ಶಾ, ದೇವೇಗೌಡರ ಮಾತುಕತೆಯಲ್ಲಿ ಮೈತ್ರಿಯ ಮಾತುಕತೆ ನಡೆದಿದೆ ಅನ್ನೋ ಬಗ್ಗೆ ವರದಿಯಾಗಿತ್ತು.
ಇದೀಗ ಈ ಸುದ್ದಿಯನ್ನು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪನವರು ಖಚಿತ ಪಡಿಸಿದ್ದಾರೆ.
ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ಇಳಿದಿರೋ ಯಡಿಯೂರಪ್ಪ ಇಂದು ಬಿಜೆಪಿ, ಜೆಡಿಎಸ್ ಮೈತ್ರಿಯನ್ನು ಖಚಿತಪಡಿಸಿದ್ದಾರೆ. ಇದರ ಜೊತೆಗೆ ರಾಜ್ಯದ 28 ಲೋಕಸಭಾ ಕ್ಷೇತ್ರದಲ್ಲಿ 4 ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಟ್ಟು ಕೊಡುವ ಬಗ್ಗೆ ಸಹಮತವಿದೆ ಎಂದಿದ್ದಾರೆ.