ಕಾಪು: ಮಹಾದೇವಿ ಪ್ರೌಢಶಾಲಾ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರಿಗೆ ಅಭಿನಂದನಾ ಸಮಾರಂಭ

ಕಾಪು ಗ್ರಾಮೋದ್ಧಾರ ಸಂಘ, ಮಹಾದೇವಿ ಪ್ರೌಢಶಾಲೆ, ಕಾಪು ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಇಂದು ಮಹಾದೇವಿ ಪ್ರೌಢಶಾಲೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಕಾಪು ಮಹಾದೇವಿ ಪ್ರೌಢಶಾಲೆಯ ಹಳೆ ವಿದ್ಯಾರ್ಥಿಯಾದ ಗುರ್ಮೆ ಸುರೇಶ್ ಶೆಟ್ಟಿ ಅವರನ್ನು ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಹೊಸ ಮಾರಿಗುಡಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ರಮೇಶ್ ಹೆಗ್ಡೆ, ವಿದ್ಯಾವರ್ಧಕ ಸಂಘದ ಆಡಳಿತಾಧಿಕಾರಿಗಳಾದ ಪ್ರೋl ವೈ. ಭಾಸ್ಕರ್ ಶೆಟ್ಟಿ, ಅಮೃತ ಮಹೋತ್ಸವ ಸಮಿತಿಯ ಅಧ್ಯಕ್ಷರಾದ ಯೋಗೀಶ್ ಶೆಟ್ಟಿ, ನಿವೃತ್ತ ಆದ್ಯಾಪಕರಾಗಿ ಅನಂತ ಯು ಪಡಿಯಾರ್, ಕಾಪು ಗ್ರಾಮೋದ್ಧಾರ ಸಂಘದ ಅಧ್ಯಕ್ಷರಾದ ಶೇಖರ್ ಸಾಲ್ಯಾನ್, ಕಾರ್ಯದರ್ಶಿಗಳಾದ ಮಾಧವ ಆರ್. ಪಾಲನ್, ಕಾಪು ಮಹಾದೇವಿ ಪ್ರೌಢಶಾಲೆ ಸಂಚಾಲಕರಾದ ವಿದ್ಯಾಧರ ಪುರಾಣಿಕ್, ಮುಖ್ಯೋಪಾಧ್ಯಾಯರಾದ ಯು. ಜ್ಯೋತಿ, ರಕ್ಷಕ-ಶಿಕ್ಷಣ ಸಂಘದ ಅಧ್ಯಕ್ಷರಾದ ಆಶಾ, ಹಳೆ ವಿದ್ಯಾರ್ಥಿ ಸಂಘದ ಗೌರವ ಅಧ್ಯಕ್ಷರಾದ ಲೀಲಾಧರ ಶೆಟ್ಟಿ, ಅಧ್ಯಕ್ಷರಾದ ಸುಜಿತ್ ಶೆಟ್ಟಿ, ಕಾರ್ಯದರ್ಶಿಗಳಾದ ಅನಿಲ್ ಕುಮಾರ್ ಹಾಗೂ ಶಾಲಾ ಅಧ್ಯಾಪಕರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

You cannot copy content from Baravanige News

Scroll to Top