ಬೈಂದೂರು, ಸೆ.12: ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಸರಾಸರಿ ಮಳೆ ಕೊರತೆಯಿಂದಾಗಿ ಭತ್ತದ ಬೆಳೆ ಹಾಗೂ ತೋಟಗಾರಿಕಾ ಬೆಳೆಗಳು ಒಣಗಿದ್ದು ಬೈಂದೂರನ್ನು ಬರಗಾಲ ಪೀಡಿತ ತಾಲೂಕನ್ನಾಗಿ ಘೋಷಿಸುವಂತೆ ಸಂಸದ ಬಿ.ವೈ. ರಾಘವೇಂದ್ರ ಮನವಿ ಮಾಡಿದರು.
ಅವರು ಬೈಂದೂರು ಆಡಳಿತ ಸೌಧದ ಶಾಸಕರ ಕಛೇರಿಯಲ್ಲಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಮಾಧ್ಯಮಗಳ ಜೊತೆ ಅವರು ಮಾತನಾಡಿದರು.
ಉಡುಪಿ ಜಿಲ್ಲೆಯಲ್ಲಿ ಸರಕಾರಿ ಬಸ್ಸುಗಳ ಸಂಖ್ಯೆ ತೀರಾ ಕಡಿಮೆಯಿದ್ದು ಶಕ್ತಿ ಯೋಜನೆಯ ಲಾಭ ಜಿಲ್ಲೆಯ ಮಹಿಳೆಯರಿಗೆ ದೊರೆಯುತ್ತಿಲ್ಲ, ಖಾಸಗಿ ಬಸ್ಸುಗಳಿಗೂ ಸಬ್ಸಿಡಿ ಒದಗಿಸಿದರೆ ಕರಾವಳಿಯ ಹೆಣ್ಣುಮಕ್ಕಳಿಗೆ ಅನುಕೂಲ ಮಾಡಿದಂತಾಗುವುದು. ಇಲ್ಲದಿದ್ದರೆ ಕೇವಲ ಮಹಿಳೆಯರಿಗೆ ಒಂದು ಕಡೆ ಹಣವನ್ನು ಕೊಟ್ಟಂತೆ ಮಾಡಿ ಟ್ಯಾಕ್ಸ್ ರೂಪದಲ್ಲಿ ಹಿಂಪಡೆಯುತ್ತಿದ್ದಾರೆ. ಇದು ತೋರಿಕೆಯ ಯೋಜನೆಯಾಗಿದೆ ಎಂದು ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ. ರಾಘವೇಂದ್ರ ಟೀಕಿಸಿದರು.