ಬಿಜೆಪಿ ಟಿಕೆಟ್ ಕೊಡಿಸೋದಾಗಿ ಹೇಳಿ ವಂಚನೆ ಆರೋಪ : ಚೈತ್ರ ಕುಂದಾಪುರ ಸೇರಿ ಮೂವರು ಪೊಲೀಸರ ವಶ..!!!

ಉಡುಪಿ : ಹಿಂದೂ ಹೋರಾಟಗಾರ್ತಿ ಚೈತ್ರಾ ಕುಂದಾಪುರ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಉದ್ಯಮಿ ಗೋವಿಂದ್ ಪೂಜಾರಿ ನೀಡಿರುವ ದೂರಿನ ಅನ್ವಯ ದಾಖಲಾಗಿದ್ದ ಕೇಸ್ ಆರೋಪದಡಿ ಬೆಂಗಳೂರು ಸಿಸಿಬಿ ಪೊಲೀಸರು ಅವರನ್ನು ಉಡುಪಿಯಲ್ಲಿ ವಶಕ್ಕೆ ಪಡೆದಿದ್ದಾರೆ.

ಚೈತ್ರಾ ಕುಂದಾಪುರ ಅವರ ವಿರುದ್ದ ಐಪಿಸಿ 420 ಅಡಿಯಲ್ಲಿ ವಂಚನೆ ಪ್ರಕರಣ ದಾಖಲಾಗಿತ್ತು.

ಉದ್ಯಮಿ ಗೋವಿಂದ್ ಬಾಬು ಪೂಜಾರಿ ಬಂಡೇಪಾಳ್ಯ ಪೊಲೀಸ್ ಠಾಣೆಯಲ್ಲಿ ಚೈತ್ರಾ ವಿರುದ್ಧ ಕೇಸ್ ನೀಡಿದ್ದರು. ಬೈಂದೂರು ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಕೊಡಿಸೋದಾಗಿ ಹೇಳಿ ಐದು ಕೋಟಿ ಪಡೆದು ವಂಚಸಿರೋದಾಗಿ ದೂರು ನೀಡಿದ್ದರು. ದೂರಿನ ಅನ್ವಯ ಕೇಸ್ ದಾಖಲಾಗಿತ್ತು. ನಂತರ ಈ ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿತ್ತು.

ಚೈತ್ರಾ ಕುಂದಾಪುರಗಾಗಿ ಹುಡುಕಾಟ

ಕೆಲ ದಿನಗಳಿಂದ ಸಿಸಿಬಿ ಪೊಲೀಸರು ಚೈತ್ರಾ ಕುಂದಾಪುರ ಅವರನ್ನು ಹುಡುಕಾಟ ನಡೆಸುತ್ತಿದ್ದರು. ಬೆಂಗಳೂರು ಹಾಗೂ ಉಡುಪಿ ಭಾಗದಲ್ಲಿ ಹುಡುಕಾಡಲಾಗಿತ್ತು. ಬಳಿಕ ಉಡುಪಿಯಲ್ಲಿ ಚೈತ್ರಾ ಕುಂದಾಪುರ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿಕೊಂಡಿದ್ದಾರೆ.

ಮೂವರು ವಶಕ್ಕೆ

ಇಂದು ಸಿಸಿಬಿ ಕಚೇರಿಗೆ ಕರೆತಂದು ವಿಚಾರಣೆ ನಡೆಸಲಿದ್ದಾರೆ. ಚೈತ್ರಾ ಕುಂದಾಪುರ ಜೊತೆ ಇನ್ನೂ ಮೂವರನ್ನು ವಶಕ್ಕೆ ಪಡೆದಿದ್ದಾರೆ.

8 ಜನರ ಮೇಲೆ ವಂಚನೆ ಆರೋಪ

ಒಟ್ಟು 8 ಜನರ ಮೇಲೆ ವಂಚನೆ ಆರೋಪದ ಅಡಿಯಲ್ಲಿ ಕೇಸ್ ದಾಖಲಾಗಿತ್ತು. ಸದ್ಯ ನಾಲ್ವರನ್ನು ವಶಕ್ಕೆ ಪಡೆದಿದ್ದು, ಇಂದು ಸಿಸಿಬಿ ಕಚೇರಿಯಲ್ಲಿ ವಿಚಾರಣೆ ಸಾಧ್ಯತೆ ಎಂದು ಹೇಳಲಾಗುತ್ತಿದೆ.

Scroll to Top