ಎಂಎಲ್ಎ ಟಿಕೆಟ್ ವಂಚನೆ: ಚೈತ್ರಾ ಕುಂದಾಪುರ ಅರೆಸ್ಟ್ ಆಗುತ್ತಿದ್ದಂತೆಯೇ ಸ್ವಾಮೀಜಿ ನಾಪತ್ತೆ

ವಿಜಯನಗರ: ಎಂಎಲ್‌ಎ ಸೀಟು ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ 5 ಕೋಟಿ ರೂ. ವಂಚನೆ ಪ್ರಕರಣದಲ್ಲಿ ತಮ್ಮ ವಿರುದ್ಧ ಕೇಸ್‌ ದಾಖಲಾಗುತ್ತಿದ್ದಂತೆ ಹಿರೇ ಹಡಗಲಿ ಹಾಲು ಮಠದ ಅಭಿನವ ಹಾಲಶ್ರೀ ನಾಪತ್ತೆಯಾಗಿದ್ದಾರೆ.

ಬಿಜೆಪಿಯಿಂದ ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ಕೋಟ್ಯಂತರ ರೂಪಾಯಿ ವಂಚಿಸಿರುವ ಆರೋಪದ ಮೇರೆಗೆ ಬೆಂಗಳೂರಿನ ಸಿಸಿಬಿ ಪೊಲೀಸರು ಚೈತ್ರಾ ಕುಂದಾಪುರಳನ್ನು ಮಂಗಳವಾರ ರಾತ್ರಿ ಬಂಧಿಸಿದ್ದಾರೆ.

ಚೈತ್ರಾ ಕುಂದಾಪುರ ಸೇರಿದಂತೆ 8 ಮಂದಿಯ ವಿರುದ್ಧ ಉದ್ಯಮಿ ಗೋವಿಂದ ಪೂಜಾರಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣದ ಮತ್ತೊಬ್ಬ 3ನೇ ಆರೋಪಿ ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಹಿರೇ ಹಡಗಲಿ ಹಾಲು ಮಠದ ಅಭಿನವ ಹಾಲಶ್ರೀ, ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ.

ಹಿಂದೂಪರ ಸಂಘಟನೆಗಳಲ್ಲಿ ಗುರುಸಿಕೊಂಡಿರುವ ಹಾಲಶ್ರೀ ವಂಚನೆ ಪ್ರಕರಣದಲ್ಲಿ A3 ಆರೋಪಿ ಆಗಿದ್ದಾರೆ. ಬೆಳಗಿನಿಂದ ಹಾಲಶ್ರೀ ಮೊಬೈಲ್ ಆಫ್ ಇದ್ದು, ಹಾಲ ಮಠಕ್ಕೂ ಬಾರದೇ ಅಜ್ಞಾತ ಸ್ಥಳಕ್ಕೆ ಸ್ವಾಮೀಜಿ ತೆರಳಿದ್ದಾರೆ.

ಕಳೆದ ಎರಡು ದಿನಗಳಿಂದ ಸ್ವಾಮೀಜಿ ಅವರು ಮಠಕ್ಕೆ ಬಂದಿಲ್ಲ.‌ ಚೈತ್ರಾ ಅವರ ಬಂಧನ ಬಳಿಕ ಸ್ವಾಮೀಜಿ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಸಿಸಿಬಿ ಪೊಲೀಸರು ಸ್ವಾಮೀಜಿಗಾಗಿ ಹುಡುಕಾಟ ನಡೆಸಿದ್ದಾರೆ.

You cannot copy content from Baravanige News

Scroll to Top