ಕಾರು-ಬೈಕ್‌ ಭೀಕರ ಅಪಘಾತ : ಯುವತಿ ಮೃತ್ಯು-ಸವಾರ ಗಂಭೀರ

ಮುಲ್ಕಿ : ಬೈಕ್‌ಗೆ ಕಾರು ಡಿಕ್ಕಿಯಾಗಿ ಸಹ ಸವಾರೆ ಮೃತಪಟ್ಟು, ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ವಿಜಯ ಸನ್ನಿಧಿ ಜಂಕ್ಷನ್ ಬಳಿ ನಡೆದಿದೆ.

ಮೃತರನ್ನು ಕೇರಳದ ಕಾಸರಗೋಡಿನ ಪ್ರೀತಿಕಾ ಶೆಟ್ಟಿ (21) ಎಂದು ಗುರುತಿಸಲಾಗಿದ್ದು, ಗಾಯಾಳು ಬೈಕ್ ಸವಾರನನ್ನು ಬಂಟ್ವಾಳ ತಾಲೂಕು ಅರಂತೋಡಿ ಬಾಳೆಪುಣಿ ನಿವಾಸಿ ಮನ್ವಿತ್ ರಾಜ್ ಶೆಟ್ಟಿ (21) ಎಂದು ಗುರುತಿಸಲಾಗಿದೆ.

ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಬೈಕ್ ಗೆ ಮುಲ್ಕಿ ರಾಷ್ಟ್ರೀಯ ಹೆದ್ದಾರಿ ವಿಜಯ ಸನ್ನಿಧಿ ಜಂಕ್ಷನ್ ಬಳಿ ಕಿನ್ನಿಗೋಳಿ ಕಡೆಯಿಂದ ಮುಲ್ಕಿ ಕಡೆಗೆ ಹೆದ್ದಾರಿ ಕ್ರಾಸ್ ಮಾಡುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ.

ಅಪಘಾತದ ತೀವ್ರತೆಗೆ ಬೈಕ್ ಹಿಂಭಾಗದಲ್ಲಿ ಕುಳಿತುಕೊಂಡಿದ್ದ ಸಹಸವಾರೆ ಪ್ರೀತಿಕಾ ಶೆಟ್ಟಿ ತಲೆಗೆ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿ ಆಸ್ಪತ್ರೆಗೆ ಸಾಗಿಸುವಾಗಲೇ ಮೃತಪಟ್ಟಿದ್ದಾರೆ.

ಅಪಘಾತದಿಂದ ಕೆಲಹೊತ್ತು ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಅಪಘಾತಕ್ಕೀಡಾದ ಎರಡು ವಾಹನಗಳನ್ನು ತೆರವುಗೊಳಿಸಿದರು.

ಸ್ಥಳಕ್ಕೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು, ಎಸಿಪಿ ಗೀತಾ ಕುಲಕರ್ಣಿ, ಇನ್ಸ್ಪೆಕ್ಟರ್ ಶರೀಫ್ ಭೇಟಿ ನೀಡಿ ಪರಿಶೀಲಿಸಿದರು.

You cannot copy content from Baravanige News

Scroll to Top