ಗಣೇಶ ಚತುರ್ಥಿಗೆ ಉಡುಪಿ, ದ.ಕ. ಜಿಲ್ಲೆಗಳಿಗೆ ಸೆ.19 ರಂದು ಸರ್ಕಾರಿ ರಜೆ ಘೋಷಣೆ

ಬೆಂಗಳೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ ಸೋಮವಾರದ ಬದಲಾಗಿ ಮಂಗಳವಾರ ರಜೆ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕರ್ನಾಟಕದಲ್ಲಿ ಗಣೇಶ ಹಬ್ಬದ ಆಚರಣೆಯ ದಿನದ ಬಗ್ಗೆ ಗೊಂದಲಗಳಿದ್ದು, ಹಲವೆಡೆ ಸೋಮವಾರ (ಸೆ.18) ದಂದು ಹಬ್ಬ ಆಚರಿಸುತ್ತಿದ್ದರೆ, ಮತ್ತೆ ಕೆಲವೆಡೆ ಮಂಗಳವಾರ (ಸೆ.19) ದಂದು ಆಚರಿಸಲಾಗುತ್ತಿದೆ. ಹಾಗಾಗಿ ಸರ್ಕಾರ ನಿಗದಿ ಪಡಿಸಿದ ರಜೆಯು ಸೋಮವಾರ ಎಂದಿದೆ.

ಇನ್ನು ಕರಾವಳಿ ಜಿಲ್ಲೆಗಳಲ್ಲಿ ಮಂಗಳವಾರ ಹಬ್ಬ ಆಚರಿಸುವ ಕಾರಣ ಅದೇ ದಿನ ಸರ್ಕಾರಿ ರಜೆ ನೀಡಬೇಕು ಒತ್ತಡ ಹಾಕಲಾಗಿದ್ದು, ಈ ಬಗ್ಗೆ ಜನಪ್ರತಿನಿಧಿಗಳು ಕೂಡಾ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು.

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಮುಖ್ಯ ಕಾರ್ಯದರ್ಶಿ ಮತ್ತು ಜಿಲ್ಲಾಧಿಕಾರಿಯವರಿಗೆ ಸೆ.19ರಂದು ರಜೆ ನೀಡಲು ಪತ್ರ ಮೂಲಕ ತಿಳಿಸಿದ್ದರು. ಇದೀಗ ಸರ್ಕಾರದ ಅಧಿಕೃತ ಆದೇಶ ಬಂದಿದೆ.

You cannot copy content from Baravanige News

Scroll to Top