ನಾರಾಯಣ ಗುರುಗಳ ಸ್ಥಬ್ದಚಿತ್ರ ಪ್ರದರ್ಶನಕ್ಕೆ ನಿರಾಕರಣೆ – 34 ಬಿಲ್ಲವ ಸಂಘಗಳ ನೇತೃತ್ವದಲ್ಲಿ ಪ್ರತಿಭಟನೆ!

ಉಡುಪಿ: ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ಥಬ್ದಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಬಗ್ಗೆ ಪ್ರಸಕ್ತ ವರ್ಷದ ಗಣರಾಜ್ಯೋತ್ಸವ ಪರೇಡಿಗೆ ಕೇಂದ್ರ ಸರ್ಕಾರವು ಅವಕಾಶ ನಿರಾಕರಣೆ ಮಾಡಿ, ಅಗೌರವ ತೋರುವ ಮೂಲಕ ಬಹುಸಂಖ್ಯಾತ ಹಿಂದುಳಿದ ವರ್ಗಗಳ ಜನರ ಮನಸ್ಸಿಗೆ ನೋವುಂಟುಮಾಡಿರುವ ನಿಲುವನ್ನು ಖಂಡಿಸಿ ಉಡುಪಿ ಜಿಲ್ಲೆಯ ಸಮಸ್ತ ಬಿಲ್ಲವ ಸಂಘ/ ಸಂಘಟನೆಗಳ ಉಪಸ್ಥಿತರಿದ್ದ 34 ಬಿಲ್ಲವ ಸಂಘಗಳ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿಗಳ ಕಛೆರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ಹಾಗೂ ಹಿರಿಯಡ್ಕ ಬಿಲ್ಲವ ಸಂಘದ ಅಧ್ಯಕ್ಷರಾದ ಮಲ್ಪೆ ರಾಘವೇಂದ್ರ ಮಾಸ್ಟರ್ ಮತ್ತು ಬೆಳ್ಮಣ್ ಬಿಲ್ಲವ ಸಂಘದ ಅಧ್ಯಕ್ಷರಾದ ಎಸ್. ಕೆ. ಸಾಲ್ಯಾನ್ ರವರ ಮುಖೇನ ನಾರಾಯಣ ಗುರುಗಳ ಸ್ಥಬ್ದಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಬೇಕೆಂದು ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀ ವಿನಯ್ ಕುಮಾರ್ ಸೊರಕೆ ಹಾಗೂ ಮಾಜಿ ಶಾಸಕರಾದ ಗೋಪಾಲ್ ಪೂಜಾರಿ, ಕಟಪಾಡಿ ವಿಶ್ವನಾಥ  ಕ್ಷೇತ್ರದ ಉಪಾಧ್ಯಕ್ಷರಾದ ಶ್ರೀಕರ ಅಂಚನ್, ಪ್ರಧಾನ ಕಾರ್ಯದರ್ಶಿ ಶಿವಾನಂದ ಹಾಗೂ ನಾರಾಯಣ ಗುರು ಯುವ ವೇದಿಕೆ ಹಾಗೂ ಯುವ ವಾಹಿನಿ ಘಟಕದ ಅಧ್ಯಕ್ಷರುಗಳು ಮತ್ತು 34 ಬಿಲ್ಲವ ಸಂಘಟನೆಗಳ ಅಧ್ಯಕ್ಷರು ಮತ್ತು ಪ್ರಮುಖರು ಉಪಸ್ಥಿತರಿದ್ದರು.

Scroll to Top