ಸುಧಾಮೂರ್ತಿ ಹೆಸರು ಬಳಸಿ ವಂಚನೆ; ಇಬ್ಬರ ವಿರುದ್ಧ ಕೇಸು ದಾಖಲು

ಬೆಂಗಳೂರು, ಸೆ 25: ಇನ್ಫೋಸಿಸ್ ಮುಖ್ಯಸ್ಥೆ ಡಾ ಸುಧಾಮೂರ್ತಿ ಅವರ ಹೆಸರು ಬಳಸಿಕೊಂಡು ವಂಚನೆ ಮಾಡಲಾಗುತ್ತಿದ್ದು ಸುಧಾಮೂರ್ತಿಯವರ ಪರ್ಸನಲ್ ಅಸಿಸ್ಟೆಂಟ್ ಮಮತ ಸಂಜಯ್ ಎಂಬುವವರು ಈ ಬಗ್ಗೆ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಜಯನಗರ ಪೊಲೀಸ್ ಠಾಣೆಯಲ್ಲಿಶೃತಿ ಹಾಗೂ ಲಾವಣ್ಯ ಎಂಬುವರ ವಿರುದ್ದ ದೂರು ದಾಖಲಾಗಿದ್ದು, ಆರೋಪಿಗಳು ಸುಧಾಮೂರ್ತಿಯವರ ಪೋಟೋಗಳನ್ನ ಬಳಸಿ ಜಾಹಿರಾತು ನೀಡಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಟಿಕೆಟ್ ಮಾರಾಟ ಮಾಡಿ ವಂಚಿಸುತ್ತಿದ್ದರು ಎನ್ನಲಾಗಿದೆ.

ಕೆಕೆಎನ್‌ಸಿಯಿಂದ 50ನೇ ವರ್ಷದ ಕಾರ್ಯಕ್ರಮಕ್ಕೆ ಸುಧಾಮೂರ್ತಿಯವರಿಗೆ ಆಹ್ವಾನಿಸಲಾಗಿತ್ತು. ಆದರೆ ಅವರು ಇಮೇಲ್ ಮೂಲಕ ಅಮೆರಿಕದಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಬರಲು ಆಗುವುದಿಲ್ಲ ಎಂದು ಸಂದೇಶ ಕಳುಹಿಸಿದ್ದರು. ಈ ನಡುವೆ ಸುಧಾಮೂರ್ತಿಯವರ ಫೋಟೋಗಳನ್ನು ಬಳಸಿಕೊಂಡು ಜಾಹೀರಾತುಗಳನ್ನು ನೀಡಲಾಗಿತ್ತು. ಇದನ್ನು ಪ್ರಶ್ನಿಸಿದಾಗ ವಂಚನೆ ಬೆಳಕಿಗೆ ಬಂದಿದೆ.

You cannot copy content from Baravanige News

Scroll to Top