ಮಂಗಳೂರು : ಡ್ರಗ್ಸ್ ಮಾರುತ್ತಿದ್ದ ವಿದ್ಯಾರ್ಥಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು

ಮಂಗಳೂರು : ಡ್ರಗ್ಸ್ ಫ್ರಿ ಮಂಗಳೂರು ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಮುಂದುವರಿಸಿದ ಕಾರ್ಯಾಚರಣೆಯಲ್ಲಿ ಮಂಗಳೂರು ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಎಂಡಿಎಂಎ ಅನ್ನು ಮಾರಾಟ ಮಾಡುತ್ತಿದ್ದ ಓರ್ವನನ್ನು ಬಂಧಿಸಿದ್ದಾರೆ.

ಮಂಗಳೂರು ನಗರದ ಬೆಂದೂರ್ ವೆಲ್ ಪರಿಸರದಲ್ಲಿ ಯುವಕನೊಬ್ಬ ಅಕ್ರಮವಾಗಿ ಎಂಡಿಎಂಎ ಮಾದಕ ವಸ್ತುವನ್ನು ವಶದಲ್ಲಿರಿಸಿಕೊಂಡು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.

ಲುಕುಮಾನುಲ್ ಹಕೀಂ ಯಾನೆ ಹಕೀಂ(22) ಬಂಧಿತ ಆರೋಪಿ.

ಇನ್ನು ಬಂಧಿತನನ್ನು ವಶಕ್ಕೆ ಪಡೆದುಕೊಂಡು ಆತನ ವಶದಿಂದ ಒಟ್ಟು 25 ಗ್ರಾಂ ತೂಕದ ರೂ. 1,25,000 ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮೊಬೈಲ್ ಫೋನ್ ಗಳು-1, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 1,60,000 ಆಗಬಹುದು.

ಆರೋಪಿಯ ವಿರುದ್ಧ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈತನು ಮಂಗಳೂರು ನಗರದ ಕಾಲೇಜುವೊಂದರ ಪದವಿ ವಿದ್ಯಾರ್ಥಿಯಾಗಿದ್ದಾನೆ ಎಂದು ತಿಳಿದು ಬಂದಿದೆ.

ಈ ಮಾದಕ ವಸ್ತು ಮಾರಾಟ ಜಾಲದ ಪತ್ತೆ ಕಾರ್ಯವನ್ನು ಮಂಗಳೂರು ನಗರದ ಮಾನ್ಯ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ ವಾಲ್ ರವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಯವರು ನಡೆಸಿದ್ದಾರೆ.

You cannot copy content from Baravanige News

Scroll to Top