ಬೆಂಗಳೂರು, ಅ 01: ಕರ್ನಾಟಕದಲ್ಲಿ ಕಾವೇರಿ ನೀರಿಗಾಗಿ ರೈತರು ಹಾಗೂ ಕನ್ನಡ ಪರ ಸಂಘಟನೆಗಳು ಪ್ರತಿಭಟನೆಯನ್ನು ಮುಂದುವರೆಸಿದ್ದು, ನಟ ಪ್ರೇಮ್ ರೈತರ ಹೋರಾಟಕ್ಕೆ ಬೆಂಬಲ ನೀಡಿ ಪ್ರಧಾನಿ ನರೇಂದ್ರ ಮೊದಿಯವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.
ಕನ್ನಡ ಚಿತ್ರರಂಗದಟ-ನಟಿಯರು ಪ್ರತಿಭಟನೆ ನಡೆಸುವ ಮೂಲಕ ಕಾವೇರಿ ನೀರಿಗಾಗಿ ಒತ್ತಾಯಿಸಿದ್ದು, ಇದೀಗ ಕಾವೇರಿ ಹೋರಾಟಕ್ಕೆ ನಟ ಪ್ರೇಮ್ ಕೂಡ ಕೈಜೋಡಿಸಿ ರೈತರ, ಕನ್ನಡಿಗರ ಹೋರಾಟಕ್ಕೆ ಸಾಥ್ ನೀಡಿದ್ದಾರೆ.
ಇನ್ನು ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ರಕ್ತದಲ್ಲಿ ಪತ್ರ ಬರೆದಿರುವ ಪ್ರೇಮ್, ಕಾವೇರಿ ವಿಚಾರವಾಗಿ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ. ಕಾವೇರಿ ನಮ್ಮದು. ಈ ವಿಚಾರವಾಗಿ ಕನ್ನಡಿಗರಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿದ್ದಾರೆ.