ಕಾಪು : ತೆರವು ವೇಳೆ ಮರ ಬಿದ್ದು ಕಾರ್ಮಿಕ ಮೃತ್ಯು : ಇಬ್ಬರಿಗೆ ಗಾಯ

ಕಾಪು : ಅಪಾಯಕಾರಿಯಾಗಿ ವಾಲಿದ್ದ ಮರ ತೆರವುಗೊಳಿಸುವ ಸಂದರ್ಭ ಮರ ಉರುಳಿ ಬಿದ್ದು ಕೂಲಿ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟ, ಉಳಿದ ಇಬ್ಬರಿಗೆ ಗಂಭೀರ ಗಾಯಗಳಾದ ಘಟನೆ ಮಜೂರು ಗ್ರಾಮದ ಕರಂದಾಡಿಯಲ್ಲಿ ಆ.2ರ ಸೋಮವಾರ ಮಧ್ಯಾಹ್ನ ನಡೆದಿದೆ.

ಬಿಹಾರ ಜಾರ್ಖಂಡ್ ಮೂಲದ ಸುಧೀರ್ ಪಾಂಜೆ ಮೃತ ಕೂಲಿ ಕಾರ್ಮಿಕನಾಗಿದ್ದು, ಗಾಯಾಳು ಮಾಹಿತಿ ತಿಳಿದುಬರಬೇಕಿದೆ.

ಕರಂದಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬಳಿಯ ಖಾಸಗಿಯವರಿಗೆ ಸೇರಿದ ನಾಗಬನ ಮತ್ತು ಮನೆ ಮೇಲೆ ಅಪಾಯಕಾರಿಯಾಗಿ ವಾಲಿದ್ದ ಗೋಳಿ ಮರವನ್ನು ಕಡಿಯುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಕಡಿದ ಮರ ಉರುಳಿಬಿದ್ದಾಗ ಮೂವರು ಕಾರ್ಮಿಕರು ಮರದಡಿಗೆ ಸಿಲುಕಿಕೊಂಡಿದ್ದು, ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮತ್ತಿಬ್ಬರನ್ನು ರಕ್ಷಣೆ ಮಾಡಿ ಉಡುಪಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿದ್ದಾರೆ.

You cannot copy content from Baravanige News

Scroll to Top