ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಉಚ್ಚಿಲ ದಸರಾ ಮಹೋತ್ಸವ ಅಂಗವಾಗಿ ಪೊಣ್ಣು ಪಿಲಿ ನಲಿಕೆ ಸ್ಪರ್ಧೆ; ಯಶ್‍ಪಾಲ್ ಸುವರ್ಣ

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನದ
ಸಹಯೋಗದೊಂದಿಗೆ ಉಚ್ಚಿಲ ದಸರಾ ಮಹೋತ್ಸವದ ಅಂಗವಾಗಿ ದಿನಾಂಕ 21-10-2023ನೇ ಶನಿವಾರ ಮಧ್ಯಾಹ್ನ 2.30ಕ್ಕೆ ಶ್ರೀಮತಿ ಶಾಲಿನಿ ಡಾ| ಜಿ.ಶಂಕರ್ ತೆರೆದ ಸಭಾಂಗಣ ಉಚ್ಚಿಲದಲ್ಲಿ “ಪೊಣ್ಣು ಪಿಲಿ ನಲಿಕೆ ಸ್ಪರ್ಧೆ” ಆಯೋಜಿಸಿರುವುದಾಗಿ ಬ್ಯಾಂಕಿನ ಅಧ್ಯಕ್ಷರಾದ ಉಡುಪಿ ಶಾಸಕ ಯಶ್‍ಪಾಲ್ ಎ. ಸುವರ್ಣ ತಿಳಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಹುಲಿ ಕುಣಿತದಲ್ಲಿ ಆಸಕ್ತಿ ತೋರುತ್ತಿದ್ದು, ತೆರೆಮರೆಯ ಪ್ರತಿಭೆಗಳಿಗೆ ಅವಕಾಶ ನೀಡುವ ಸಲುವಾಗಿ ಈ ವೇದಿಕೆ ಕಲ್ಪಿಸಲಾಗಿದೆ. ಗುಂಪು ಹಾಗೂ ವೈಯಕ್ತಿಕ “ಸೀರೆ ವಿಭಾಗ”ದಲ್ಲಿ ಸ್ಪರ್ಧೆಯು ನಡೆಯಲಿದ್ದು, ಮಹಿಳೆಯರಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ. ವಯಸ್ಸಿನ ಮಿತಿ ಇರುವುದಿಲ್ಲ, ಹಿನ್ನಲೆ ಸಂಗೀತ (ತಾಸೆ&ವಾದ್ಯ) ಒದಗಿಸಲಾಗುವುದು ಹಾಗೂ ವೇಷ ಭೂಷಣಕ್ಕೆ ಪ್ರಾಶಸ್ತ್ಯ ನೀಡಲಾಗುವುದಿಲ್ಲ.

ಪ್ರತಿ ವಿಭಾಗದಲ್ಲಿ ಪ್ರಥಮ, ದ್ವಿತೀಯ, ತೃತೀಯ ವಿಜೇತರನ್ನು ಆಯ್ಕೆ ಮಾಡಲಿದ್ದು, ಸ್ಪರ್ಧೆಯಲ್ಲಿ ಭಾಗವಹಿಸಲು ನೋಂದಣಿಗಾಗಿ ಹಾಗೂ ಸ್ಪರ್ಧೆಯ ಹೆಚ್ಚಿನ ಮಾಹಿತಿಗಾಗಿ 9972120332 ಮೊಬೈಲ್ ಸಂಖ್ಯೆಗೆ ಸಂಪರ್ಕಿಸಬಹುದು. ಮಹಿಳೆಯರು ಈ ಸ್ಪರ್ಧೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಪ್ರಕಟಣೆಯಲ್ಲಿ ಯಶ್‍ಪಾಲ್ ಎ. ಸುವರ್ಣ ತಿಳಿಸಿದ್ದಾರೆ.

You cannot copy content from Baravanige News

Scroll to Top