ಮೂಡುಬಿದಿರೆ: ಬಾಗಲಕೋಟೆ ಮೂಲದ ಯುವಕ ಆತ್ಮಹತ್ಯೆ

ಮೂಡುಬಿದಿರೆ, ಅ.10: ಕಾಲೇಜೊಂದರಲ್ಲಿ ದಾಖಲಾತಿ ವಿಭಾಗದಲ್ಲಿ ಉದ್ಯೋಗಿಯಾಗಿರುವ ಯುವಕನೋರ್ವ ಹಾಸ್ಟೇಲಿನ ರೂಮಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮೂಲತ: ಬಾಗಲಕೋಟೆಯ ನಿವಾಸಿ ಹನುಮಂತಪ್ಪ (24) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ.

ಯುವಕ ಜನವರಿಯಲ್ಲಿ ಉದ್ಯೋಗಕ್ಕೆ ಸೇರಿಕೊಂಡಿದ್ದು, ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ. ಹನುಮಂತಪ್ಪನ ಹೆತ್ತವರು ಮೂಡುಬಿದಿರೆಗೆ ಬಂದ ನಂತರ ಮೃತದೇಹವನ್ನು ಅವರಿಗೆ ಒಪ್ಪಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Scroll to Top