ಉಡುಪಿಗೆ ಆಗಮಿಸಿದ ರಾಜ್ಯಪಾಲರು : ಬಿಜೆಪಿ ನಿಯೋಗದಿಂದ ಗೌರವ

ಉಡುಪಿ : ಕೋಟ ಶಿವರಾಮ ಕಾರಂತರ ಜನ್ಮದಿನಾಚರಣೆ ಕಾರ್ಯಕ್ರಮಕ್ಕೆ ಉಡುಪಿ ಜಿಲ್ಲೆಗೆ ಕರ್ನಾಟಕ ರಾಜ್ಯದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಆಗಮಿಸಿದರು.


ಇಂದು ಉಡುಪಿ ಜಿಲ್ಲೆಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿರುವ ರಾಜ್ಯಪಾಲರು, ಕೋಟ ಶಿವರಾಮ ಕಾರಂತ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಭಾಗಿಯಾಗಲಿದ್ದಾರೆ. ಆ ಬಳಿಕ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ಮಾಡಿ ಸಂಜೆ ಮತ್ತೆ ಮಂಗಳೂರು ವಿಮಾನ ನಿಲ್ದಾಣದ ಮುಖೇನವಾಗಿ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

ಈ ಸಂದರ್ಭದಲ್ಲಿ ಉಡುಪಿ ಬಿಜೆಪಿ ನಿಯೋಗದಿಂದ ಗೌರವ ಸಲ್ಲಿಸಲಾಯಿತು. ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಲಾಡಿ ಸುರೇಶ್ ನಾಯಕ್ ರಾಜ್ಯಪಾಲರಿಗೆ ಅಭಿನಂದನೆ ಸಲ್ಲಿಸಿದರು. ವಿಭಾಗ ಪ್ರಭಾರಿಗಳಾದ ಉದಯಕುಮಾರ್ ಶೆಟ್ಟಿ,ಶಾಸಕರುಗಳಾದ ಯಶ್ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ ಗಂಟಿಹೊಳೆ, ಮಾಜಿ ಶಾಸಕರಾದ ಕೆ ರಘುಪತಿ ಭಟ್, ಪ್ರಮೋದ್ ಮಧ್ವರಾಜ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ ಶೆಟ್ಟಿ, ಜಿಲ್ಲಾ ಬಿಜೆಪಿ ವಕ್ತಾರರಾದ ಕೆ ರಾಘವೇಂದ್ರ ಕಿಣಿ, ಪೂರ್ಣಿಮಾ ಸುರೇಶ್ ಉಪಸ್ಥಿತರಿದ್ದರು.

Scroll to Top