ಉಡುಪಿ : ಅಪರಿಚಿತ ವ್ಯಕ್ತಿಯೊಬ್ಬರ ಶವ ಕರಾವಳಿ ಹೋಟೆಲಿನ ಆವರಣದಲ್ಲಿ ಪತ್ತೆಯಾಗಿದ್ದು, ಮೇಲ್ನೋಟಕ್ಕೆ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳೀಯವಾಗಿ ಗುಜರಿ ಹೆಕ್ಕುತ್ತಿದ್ದ ಈ ವ್ಯಕ್ತಿಯನ್ನು ದುಷ್ಕರ್ಮಿಗಳು ಕಳೆದ ರಾತ್ರಿ ಹರಿತವಾದ ಆಯುಧದಿಂದ ವ್ಯಕ್ತಿಯ ಬಲ ಕೈ ಕಡಿದಿದ್ದು ಇದರಿಂದ ತೀವ್ರ ರಕ್ತಸ್ರಾವ ಉಂಟಾಗಿ ಅವರು ಮೃತಪಟ್ಟಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಮಾಹಿತಿ ಪಡೆದ ಸಮಾಜ ಸೇವಕ ವಿಶು ಶೆಟ್ಟಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸ್ ಅಧಿಕಾರಿ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.
ಉಡುಪಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ವಿಶು ಶೆಟ್ಟಿಯವರು ಕೆಎಂಸಿ ಶವಾಗಾರದಲ್ಲಿ ಶವ ಇಡಲು ಪೊಲೀಸರಿಗೆ ಸಹಕರಿಸಿದ್ದಾರೆ. ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು, ವಿಶು ಶೆಟ್ಟಿ ಹಾಗೂ ರಾಮದಾಸ್ ಪಾಲನ್ ಕಾನೂನು ಪ್ರಕ್ರಿಯೆಗೆ ಸಹಕರಿಸಿದ್ದಾರೆ. ಸಂಬಂಧಿಕರು ಅಥವಾ ಸಂಬಂಧ ಪಟ್ಟವರು ಠಾಣೆಗೆ ಸಂಪರ್ಕಿಸುವಂತೆ ಕೋರಲಾಗಿದೆ.