ಹಾಸ್ಟೆಲ್‌ನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವು

ತುಮಕೂರು : ಇಂಜಿನಿಯರಿಂಗ್ ಓದುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಪ್ರತಿಷ್ಠಿತ ಸಿದ್ಧಾರ್ಥ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದೆ.

ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ‌ಮೂಲದ ಶಿವಪುರ ಗ್ರಾಮದ ಬನಸಿರಿ ‌(20) ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ.

ಸಿದ್ಧಾರ್ಥ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬನಸಿರಿ ಟೆಲಿಕಾಂ ಓದುತ್ತಿದ್ದಳು. 3ನೇ ಸೆಮಿಸ್ಟರ್ ಓದುತ್ತಿದ್ದ ಬನಸಿರಿ, ಸೆಕೆಂಡ್ ಸೆಮ್‌ನಲ್ಲಿ‌ ಹೆಚ್ಚು ಸಬ್ಜೆಕ್ಟ್‌ಗಳಲ್ಲಿ ಫೇಲ್ ಆಗಿದ್ದಳು. ಹಲವು ಸಬ್ಜೆಕ್ಟ್‌ಗಳು ಬ್ಯಾಕ್ ಆಗಿದ್ದರಿಂದ ಇಂಜಿನಿಯರಿಂಗ್ ಬಿಟ್ಟು ಡಿಗ್ರಿಗೆ ಸೇರಬೇಕು ಎಂದು ಹೇಳಿಕೊಂಡಿದ್ದರು. ಅಷ್ಟರಲ್ಲೇ ಈ ದುರಂತ ಸಂಭವಿಸಿದೆ.

ಗರ್ಲ್ಸ್ ಹಾಸ್ಟೆಲ್‌ನ 101B ಕೊಠಡಿಯಲ್ಲಿ ತಂಗಿದ್ದ ವಿದ್ಯಾರ್ಥಿನಿ, ನಿನ್ನೆ ಮಧ್ಯಾಹ್ನ ಊಟ ಮುಗಿಸಿಕೊಂಡು ಬಂದ ಬಳಿಕ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.

ಗೃಹ ಸಚಿವ ಡಾ.ಜಿ. ಪರಮೇಶ್ವರ್ ಒಡೆತನದ ಸಿದ್ಧಾರ್ಥ ಇಂಜಿನಿಯರಿಂಗ್ ಕಾಲೇಜು ಇದಾಗಿದೆ. ತುಮಕೂರಿನ ತಿಲಕ್ ಪಾರ್ಕ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

You cannot copy content from Baravanige News

Scroll to Top