ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಆರೋಪಿಗಳ ಮಾಹಿತಿ ನೀಡಿದವರಿಗೆ ಎರಡು ಲಕ್ಷ ರೂ ಬಹುಮಾನ ಘೋಷಿಸಿದ ಎನ್ಐಎ

ಮಂಗಳೂರು, ಅ.27: ಬಿಜೆಪಿ ಯುವ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಭಾಗಿಯಾದ ಮೂವರು ಆರೋಪಿಗಳ ಮಾಹಿತಿ ನೀಡಿದವರಿಗೆ ಎನ್ಐಎ 2 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ಘೋಷಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ಅವರು ಜುಲೈ 26 ರಂದು ರಾತ್ರಿ 8 ಗಂಟೆಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಪ್ರವೀಣ್ ಕುಮಾರ್ ಸಾವನಪ್ಪಿದ್ದರು.

ಈ ಪ್ರಕರಣದ ತನಿಖೆಯನ್ನು ರಾಜ್ಯ ಸರಕಾರ ಎನ್ಐಎಗೆ ವಹಿಸಿತ್ತು. ಈಗಾಗಲೇ ಹಲವರನ್ನು ಎನ್ಐಎ ಬಂಧಿಸಿ ವಿಚಾರಣೆ ನಡೆಸುತ್ತಿದ್ದೆ. ಇನ್ನು ಕೆಲವು ಆರೋಪಿಗಳ ಬಂಧನವಾಗದ ಹಿನ್ನಲೆ ಈ ಸಂಬಂಧ ಎನ್‌ಐಎ ರಿವಾರ್ಡ್‌ ವಾಂಟೆಡ್‌ ನೋಟಿಸ್‌ ಅನ್ನು ಬಿಡುಗಡೆ ಮಾಡಿದೆ. ಆರೋಪಿ ನಂ.23 ನೌಷಾದ್‌ನ ಸುಳಿವಿಗೆ 2 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ತಿಳಿಸಿದೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಲೂಕಿನ ಪಡಂಗಡಿ ಗ್ರಾಮದ ನೌಷಾದ್. ಈತ ನಿಷೇಧಿತ ಪಿಎಫ್ಐ ಸಂಘಟನೆಯ ಕಾರ್ಯಕರ್ತನಾಗಿದ್ದ ಎನ್ನಲಾಗಿದೆ. ಅಲ್ಲದೆ ಪಿಎಫ್ಐ ನ ಸದಸ್ಯರಾದ ಮತ್ತಿಬ್ಬರು ಆರೋಪಿಗಳು ಅಬ್ದುಲ್ ನಾಸೀರ್ ಮತ್ತು ಅಬ್ದುಲ್ ರೆಹಮಾನ್ ಅವರ ಮಾಹಿತಿಗೂ 2 ಲಕ್ಷ ಬಹುಮಾನ ಘೋಷಿಸಿದೆ.

You cannot copy content from Baravanige News

Scroll to Top