ನಿನ್ನೆ ಕೋಲ್ಕತ್ತಾದ ಈಡನ್ ಗಾರ್ಡನ್ನಲ್ಲಿ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ನಡುವೆ ವಿಶ್ವಕಪ್ ಪಂದ್ಯ ನಡೆಯಿತು. ಈ ವೇಳೆ ಕೆಲವು ಕಿಡಿಗೇಡಿಗಳು ಪ್ಯಾಲೆಸ್ತೀನ್ ಧ್ವಜ ಹಿಡಿದು ವಿಕೃತಿ ಮೆರೆದಿದ್ದರು. ಇದೀಗ ಕೋಲ್ಕತ್ತ ಪೊಲೀಸರು ಧ್ವಜ ಹಿಡಿದು ಫೋಟೋಗೆ ಪೋಸ್ ನೀಡಿದ ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಮೈದಾನದ G1 ಮತ್ತು H1 ಬ್ಲಾಕ್ನಲ್ಲಿ ನಡೆದಿತ್ತು. ಬಾಂಗ್ಲಾದೇಶ ತಂಡ ಬ್ಯಾಟಿಂಗ್ ನಡೆಸುವ ಸಂದರ್ಭದಲ್ಲಿ ಪ್ಯಾಲೆಸ್ತೀನ್ ಪ್ಲಾಗ್ ಹಿಡಿದು ಸಂಭ್ರಮಿಸಿದ್ದರು. ವೈರಲ್ ಆಗಿರುವ ವಿಡಿಯೋದಲ್ಲಿ ಮೂವರು ಪ್ಯಾಲೆಸ್ತೀನ್ ಧ್ವಜವನ್ನು ಹಿಡಿದು ನಿಂತಿರೋದನ್ನು ನೋಡಬಹುದಾಗಿತ್ತು.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮೈದಾನದಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ ಮಾಡಿರೋದನ್ನು ಬಿಜೆಪಿ ಟೀಕಿಸಿದೆ. ಇದು ಪೊಲೀಸ್ ಅಧಿಕಾರಿಗಳ ಜವಾಬ್ದಾರಿ, ಈ ರೀತಿಯ ಪ್ರದರ್ಶನಕ್ಕೆ ಅವಕಾಶ ಮಾಡಿಕೊಡಬಾರದು. ಇದೆಲ್ಲ ಹೇಗೆ ಮಾಡೋಕೆ ಸಾಧ್ಯ? ಇದು ರಾಷ್ಟ್ರದ ಮೇಲೆ ಪರಿಣಾಮ ಬೀರಲಿದೆ ಕೋಲ್ಕತ್ತ ಬಿಜೆಪಿ ಕಿಡಿಕಾರಿದೆ.