ಎಕ್ಸಾಂ ನಲ್ಲಿ ಕಾಪಿ ಮಾಡಿದ ಆರೋಪ; ಬಿಲ್ಡಿಂಗ್ ಮೇಲಿಂದ ಬಿದ್ದು ವಿದ್ಯಾರ್ಥಿನಿ ಸಾವು

ಹಾಸನ, ನ.02: ಕಾಲೇಜಿನ 5ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಹಾಸನ ನಗರದ ಹೊರವಲಯದಲ್ಲಿ ನಡೆದಿದೆ.

ರಾಜೀವ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ಮಾನ್ಯ (19) ಮೃತ ವಿದ್ಯಾರ್ಥಿನಿ.

ಮೃತ ದುರ್ದೈವಿ ಮಾನ್ಯ ಪ್ರಥಮ ವರ್ಷದ ಎಲೆಕ್ಟ್ರಾನಿಕ್ ಅಂಡ್ ಕಮೂನಿಕೇಷನ್ ಓದುತ್ತಿದ್ದಳು. ಮಾನ್ಯ ಚನ್ನರಾಯಪಟ್ಟಣ ತಾಲ್ಲೂಕಿನ ದಂಡಿಗನಹಳ್ಳಿ ಹೋಬಳಿ ಹೊನ್ನಶೆಟ್ಟಿಹಳ್ಳಿ ಗ್ರಾಮದ ನಿವಾಸಿ.

ಇಂದು ಮೊದಲ ವರ್ಷದ ಪರೀಕ್ಷೆ ಬರೆಯುತ್ತಿದ್ದಳು. ಪರೀಕ್ಷೆ ಬರೆಯುತ್ತಿದ್ದ ಸಮಯದಲ್ಲಿ ಕಾಪಿ ಹೊಡೆದಿದ್ದಾಳೆ ಎಂಬ ಆರೋಪ ಕೇಳಿ ಬಂದಿತ್ತು.

ಪರೀಕ್ಷೆಯಲ್ಲಿ ನಕಲು ಮಾಡಿದ ಆರೋಪದಲ್ಲಿ ಉಪನ್ಯಾಸಕರು ಕಾಲೇಜು ಪ್ರಾಂಶುಪಾಲರಿಗೆ ಅಪಾಲಜಿ ಬರೆದುಕೊಡುವಂತೆ ಹೇಳಿದ್ದರು. ಅದಕ್ಕೆ ಮನನೊಂದು ಐದನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಮಾನ್ಯ ಆತ್ಮಹತ್ಯೆ ‌ಮಾಡಿಕೊಂಡಿದ್ದಾಳೆ ಎಂದು ಶಂಕಿಸಲಾಗಿದೆ.

ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

You cannot copy content from Baravanige News

Scroll to Top