ಪಡುಬಿದ್ರಿ: ಬಸ್ ಗೆ ಡಿಕ್ಕಿ ಹೊಡೆದ ಬೈಕ್; ಹಿಂದಿನಿಂದ ಬರುತ್ತಿದ್ದ ಟಿಪ್ಪರ್ ಅಡಿಗೆ ಬಿದ್ದು ವಿದ್ಯಾರ್ಥಿ ಮೃತ್ಯು

ಪಡುಬಿದ್ರಿ, ನ.03: ಬಸ್ ಗೆ ಬೈಕ್ ಡಿಕ್ಕಿ ಹೊಡೆದು ಹಿಂದಿನಿಂದ ಬರುತ್ತಿದ್ದ ಟಿಪ್ಪರ್ ಅಡಿಗೆ ಬಿದ್ದು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಇಂದು ಸಂಜೆ ನಡೆದಿದೆ.

ಐಟಿಐ ವಿದ್ಯಾರ್ಥಿ ಪ್ರಜ್ವಲ್ (18) ಮೃತ ದುರ್ದೈವಿ.

ಪ್ರಜ್ವಲ್ ರವರು ಚಲಾಯಿಸುತ್ತಿದ್ದ ಬೈಕ್ ಬಸ್ ಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ರಸ್ತೆಗೆಸೆಯಲ್ಪಟ್ಟು ಹಿಂಬದಿಯಿಂದ ಬರುತ್ತಿದ್ದ ಟಿಪ್ಪರ್ ಆತನ ಮೇಲೆ ಹರಿದಿದ್ದು, ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

Scroll to Top