ಗ್ರಾಮ ಪಂಚಾಯತ್ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ಸರ್ಕಾರದ ವಿಧಾನ ಪರಿಷತ್ ಶಾಸಕರಾದ ಕೆ. ಮಂಜುನಾಥ ಭಂಡಾರಿ ರವರಿಗೆ ಮನವಿ ಸಲ್ಲಿಕೆ

ಮಂಗಳೂರು : ಗ್ರಾಮ ಪಂಚಾಯತ್ ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿವಿಧ ವೃಂದದ ಗ್ರಾಮ ಪಂಚಾಯಿತಿ ನೌಕರರ ವಿವಿಧ ಬೇಡಿಕೆ ಈಡೇರಿಕೆ ಮತ್ತು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕಾಗಿ ವಿಶೇಷವಾಗಿ 31. 10. 2017ರ ಪೂರ್ವದಲ್ಲಿ ಗ್ರಾಮ ಪಂಚಾಯತ್ ನೇಮಿಸಿಕೊಂಡ ಅನುಮೋದನೆ ಆಗದ ಡಾಟಾ ಎಂಟ್ರಿ ಆಪರೇಟರ್ ಗಳ ಹುದ್ದೆ ಅನುಮೋದನೆಯ ವಿಚಾರವಾಗಿ ಸರ್ಕಾರದ ಗಮನ ಸೆಳೆಯುವ ನಿಟ್ಟಿನಲ್ಲಿ ಇಂದು ವಿಧಾನಪರಿಷತ್ ಶಾಸಕರಾದ ಕೆ ಮಂಜುನಾಥ್ ಭಂಡಾರಿ ರವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು.



ಡಾಟಾ ಎಂಟ್ರಿ ಆಪರೇಟರ್ ವೃಂದದ ನೌಕರರೊಂದಿಗೆ ಬಹಳ ಸುದೀರ್ಘವಾಗಿ ಚರ್ಚಿಸಿದ ಶಾಸಕರು ಹುದ್ದೆ ಅನುಮೋದನೆಯ ಬಗ್ಗೆ ಸರ್ಕಾರದ ಗಮನ ಸೆಳೆಯುವುದಾಗಿ ಮತ್ತು ತುರ್ತಾಗಿ ಸಚಿವರು ಮತ್ತು ಅಧಿಕಾರಿಗಳಿಗೆ ಈ ಸಂಬಂಧ ಪತ್ರ ಬರೆದು ಸಭೆ ನಡೆಸಿ ಚರ್ಚಿಸಿ ಅನುಮೋದನೆ ದೊರಕಿಸಿಕೊಡುವ ಕೆಲಸ ಮಾಡುವುದಾಗಿ ಭರವಸೆ ನೀಡಿದರು.

ಸೇವಾ ಹಿರಿತನಕ್ಕೆ ಅನುಗುಣವಾಗಿ ವೇತನ ಶ್ರೇಣಿ ನಿಗದಿ ,ಗ್ರೇಡ್ 2 ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕರ ಹುದ್ದೆ ನೇಮಕಾತಿ,
31 .10 .2017ಪೂರ್ವದಲ್ಲಿ ಗ್ರಾಮ ಪಂಚಾಯತ್ ನೇಮಿಸಿಕೊಂಡ ವಿವಿಧ ವರ್ಗದ ಹುದ್ದೆಗಳಲ್ಲಿ ಅನುಮೋದನೆ ಯಾಗದ ಕೆಲವೊಂದು ಸಿಬ್ಬಂದಿಗಳ ಹುದ್ದೆ ಅನುಮೋದನೆ ,
ಸಿಬ್ಬಂದಿಗಳ ಇಎಸ್ಐ ಮತ್ತು ಪಿಎಫ್ ಸೌಲಭ್ಯ ಇತ್ಯಾದಿ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದು ಗ್ರಾಮ ಪಂಚಾಯತ್ ನ ಎಲ್ಲಾ ವರ್ಗದ ನೌಕರರ ಬೇಡಿಕೆಯ ಬಗ್ಗೆ ತನಗೆ ಸಂಪೂರ್ಣ ಅರಿವಿದ್ದು ಎಲ್ಲಾ ಬೇಡಿಕೆಗಳನ್ನ ಈಡೇರಿಸುವ ಬಗ್ಗೆ ಕ್ರಮ ವಹಿಸುವುದಾಗಿ ಕೂಡ ತಿಳಿಸಿದರು.



ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ (ಸಿಐಟಿಯು)ಸಂಯೋಜಿತ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷರು ,ಪ್ರಧಾನ ಕಾರ್ಯದರ್ಶಿ ,ತಾಲೂಕು ಘಟಕಗಳ ಅಧ್ಯಕ್ಷರು,ಕಾರ್ಯದರ್ಶಿ, ಪದಾಧಿಕಾರಿಗಳು ಹಾಗೂ ಜಿಲ್ಲೆಯ ಡಾಟಾ ಎಂಟ್ರಿ ಆಪರೇಟರ್ ವೃಂದದ ನೌಕರರು ಉಪಸ್ಥಿತರಿದ್ದರು.

Scroll to Top