ಪ್ರತಿಮಾ ಕೊಲೆ ಪ್ರಕರಣ; ಆರೋಪಿ ಕಾರು ಚಾಲಕನ ಬಗ್ಗೆ ಪೊಲೀಸ್ ಕಮಿಷನರ್ ಏನಂದ್ರು?

ಬೆಂಗಳೂರು, ನ.06: ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣ ಸಂಭದಿಸಿದಂತೆ ಓರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಕಿರಣ್ ಎಂಬಾತನನ್ನು ಪೊಲೀಸರು ವಶಕ್ಕೆ ​ಪಡೆದಿದ್ದು, ಈತನೇ ಮಹಿಳಾ ಅಧಿಕಾರಿಯನ್ನು ಕೊಲೆ ಮಾಡಿದ್ದಾನೆ ಎಂಬ ಮಾಹಿತಿಯೊಂದು ಹೊರಬಿದ್ದಿದೆ.

ಸುಬ್ರಮಣ್ಯಪುರ ಪೊಲೀಸರು ಪ್ರತಿಮಾ ಕೊಲೆಗೆ ಸಂಬಂಧಿಸಿದಂತೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಅದರಲ್ಲಿ ಕಿರಣ್​ ಎಂಬಾತ ಪ್ರತಿಮಾ ಅವರ ಹಳೆ ಡ್ರೈವರ್​ ಆಗಿದ್ದನು ಎಂಬುದು ತಿಳಿದುಬಂದಿದೆ.

ಸದ್ಯ ಹೊರಬಿದ್ದ ಮಾಹಿತಿ ಪ್ರಕಾರ, ವಿಚಾರಣೆ ನಡೆಸಿದ್ದ ವೇಳೆ ಕೊಲೆ ಮಾಡಿದ್ದು ಒಬ್ಬನೇ ಎಂಬುದು ಬಯಲಿಗೆ ಬಂದಿದೆ. ಕಿರಣ್ ಎಂಬಾತನೇ ಈ ಕೊಲೆ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ. ಸದ್ಯ ಕಿರಣ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರತಿಮಾ ಒಂದು ವಾರದ ಹಿಂದೆ ಕಿರಣ್​ನನ್ನು ಕೆಲಸದಿಂದ ತೆಗೆದಿದ್ದರು. ಕೆಲ ವಿಚಾರಗಳಿಗೆ ಪ್ರತಿಮಾ ಮತ್ತು ಕಿರಣ್ ನಡುವೆ ಭಿನ್ನಾಭಿಪ್ರಾಯ ಬಂದಿತ್ತು. ಕೆಲಸದಿಂದ ವಜಾಗೊಳಿಸಿದ್ದಕ್ಕೆ ಕೋಪಗೊಂಡಿದ್ದ ಕಿರಣ್ ಈ ಕೃತ್ಯ ವೆಸಗಿದ್ದಾನೆ ಎನ್ನಲಾಗುತ್ತಿದೆ.

ಪ್ರತಿಮಾ ಮನೆಗೆ ಬಂದು ಕೊಲೆ ಮಾಡಿರುವುದಾಗಿ ಮಾಹಿತಿ ಹೊರಬಿದ್ದಿದೆ. ಸದ್ಯ ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ನಂತರ ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ.

ಪೊಲೀಸ್ ಕಮಿಷನರ್ ಬಿ.ದಯಾನಂದ ಏನಂದ್ರು..!??

ಮಹಿಳಾ ಅಧಿಕಾರಿ ಪ್ರತಿಮಾ ಕೊಲೆ ಸಂಬಂಧ ಕಾರು ಚಾಲಕ ಕಿರಣ್​ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಳ್ಳಲಾಗಿದೆ. ಮಲೆ ಮಹದೇಶ್ವರ ಬಳಿ ಆತನನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಹೇಳಿದ್ದಾರೆ.

ಚಾಲಕ ಕಿರಣ್​ ಪ್ರತಿಮಾ ಅವರ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದನು. ಇತ್ತೀಚಿಗೆ ಆತನನ್ನು ಕೆಲಸದಿಂದ ತೆಗೆದು ಹಾಕಿದ್ದಾರೆ ಎಂದು ಪೊಲೀಸ್ ಕಮೀಷನರ್ ಬಿ ದಯಾನಂದ್ ಹೇಳಿದ್ದಾರೆ​.

ಬಳಿಕ ಮಾತನಾಡಿದ ಅವರು ಕಿರಣ್​ 5 ವರ್ಷದಿಂದ ಅವರ ಬಳಿ ಕೆಲಸ ಮಾಡುತ್ತಿದ್ದನು. ಹತ್ತು ದಿನಗಳ ಹಿಂದೆ ಕೆಲಸದಿಂದ ವಜಾ ಮಾಡಿದ್ದರು. ಸದ್ಯ ದಕ್ಷಿಣ ವಿಭಾಗದ ಡಿಸಿಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

Scroll to Top