ಪುತ್ತೂರು: ಪುತ್ತೂರಿನಲ್ಲಿ ನ. 6ರಂದು ದುಷ್ಕರ್ಮಿಗಳಿಂದ ಹತ್ಯೆಗೀಡಾಗಿರುವ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ನಿವಾಸಕ್ಕೆ ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿ ಅಕ್ಷಯ್ ಪೋಷಕರಿಗೆ ಸಾಂತ್ವನ ಹೇಳಿದ್ದಾರೆ.
ಈ ಸಂದರ್ಭ ಅಕ್ಷಯ್ ತಂದೆ ತನ್ನ ಮಗನನ್ನು ಕೊಂದವರಿಗೆ ತಕ್ಕ ಶಿಕ್ಷೆ ಆಗಬೇಕೆಂದು ಶ್ರೀನಿವಾಸ ಪೂಜಾರಿ ಅವರಲ್ಲಿ ಆಗ್ರಹಿಸಿದ್ದಾರೆ.
ತನ್ನ ಮಗನ ಬಗ್ಗೆ ಮಾಧ್ಯಮದವರು ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ, ಆತ ಮಾಡಿದ ಒಳ್ಳೆ ಕೆಲಸಗಳ ಬಗ್ಗೆ ಹೇಳದೆ, ಆತ ಒಬ್ಬ ರೌಡಿಶೀಟರ್ ಎಂಬುದಾಗಿ ಉಲ್ಲೇಖ ಮಾಡುತ್ತಿದ್ದಾರೆ ಎಂದು ಅಕ್ಷಯ್ ತಂದೆ ಕೋಟ ಶ್ರೀನಿವಾಸ ಪೂಜಾರಿ ಅವರಲ್ಲಿ ತಮ್ಮ ಅಳಲು ವ್ಯಕ್ತಪಡಿಸಿ ಮಾಧ್ಯಮದವರ ಮೇಲೆ ಹರಿಹಾಯ್ದರು.