ಬೆಚ್ಚ ಬೆಚ್ಚ ನ್ಯೂಸ್
15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು!
ಪುತ್ತೂರು : ಮುಸ್ಲಿಂ ಯುವತಿಗೆ ಚೂರಿ ಇರಿದ ಹಿಂದೂ ಯುವಕ : ಆಸ್ಪತ್ರೆಗೆ ದಾಖಲು!
ಬಟ್ಟೆ ಕೊಳ್ಳುವ ವಿಚಾರಕ್ಕೆ ಪತಿ-ಪತ್ನಿ ನಡುವೆ ಜಗಳ : ಕೊಲೆಯಲ್ಲಿ ಗಲಾಟೆ ಅಂತ್ಯ
ಶಿರ್ವ: ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಸಂಸ್ಥಾಪಕ ಗೇಬ್ರಿಯಲ್ ನಜರೆತ್ ನಿಧನ
ಅಧಿಕ ಲಾಭಾಂಶ ಆಮಿಷ ; ಹಿರಿಯ ನಾಗರಿಕರಿಗೆ ಲಕ್ಷಾಂತರ ರೂ.ವಂಚನೆ
ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಖಂಡಿಸಿ ಮೆರವಣಿಗೆ, ಮುಷ್ಕರ
ಸೂಡ ಶ್ರೀ ಸುಬ್ರಹ್ಮಣ್ಯ ಕುಣಿತ ಭಜನಾ ಮಂಡಳಿ ಉದ್ಘಾಟನಾ ಸಮಾರಂಭ
ತಂದೆಯನ್ನು ಆಸ್ಪತ್ರೆಗೆ ಸೇರಿಸಿ ಕಾರಿನಲ್ಲಿ ಎಸಿ ಹಾಕಿ ಮಲಗಿದ್ದ ಮಗ ಸಾವು
ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿ
ಮುಳುವಾದ ಸೌಂದರ್ಯ… ಪತ್ನಿ ನೋಡಲು ಸುಂದರವಾಗಿದ್ದಾಳೆಂದು ಆಕೆಯ ಕಥೆಯನ್ನೇ ಮುಗಿಸಿದ ಪತಿರಾಯ
Next
Prev

ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳೊಂದಿಗೆ 600 ಕಿ.ಮೀ ಪ್ರಯಾಣಿಸಿದ ಶ್ವಾನ..!

ಮಂಗಳೂರು : ಪಾದಯಾತ್ರೆ ನಡೆಸುತ್ತಿದ್ದ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳ ಜೊತೆಗೆ ಅಪರಿಚಿತ ಶ್ವಾನವೊಂದು ಸುಮಾರು 600ಕಿ.ಮೀ ಹೆಜ್ಜೆ ಹಾಕಿದ ಘಟನೆ ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ.

ಶಬರಿಮಲೆ ಅಯ್ಯಪ್ಪ ದೇವರ ಸನ್ನಿಧಾನಕ್ಕೆ ತೆರಳಿದ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಬೇಕ್ಕೇರಿ ಗ್ರಾಮದಿಂದ ಅಯ್ಯಪ್ಪ ಮಾಲಾಧಾರಿಗಳು ನ.4 ರಂದು ಪಾದಯಾತ್ರೆ ಶುರು ಮಾಡಿದ್ದರು. ಇವರು ಪಾದಯಾತ್ರೆ ಮಾಡುತ್ತಿದ್ದ ವೇಳೆ ಗೋಕಾಕ್ ತಾಲೂಕಿನ ಗ್ರಾಮವೊಂದರಲ್ಲಿ ಅಪರಿಚಿತ ಶ್ವಾನವೊಂದು ಅವರ ಜೊತೆಗೆ ಹೆಜ್ಜೆ ಹಾಕಿದೆ. ಮೊದಲು ಏನೋ ಸ್ವಲ್ಪ ದೂರ ಬರಬಹುದು ಎಂದು ಅಯ್ಯಪ್ಪ ಮಾಲಾಧಾರಿಗಳು ಅಂದುಕೊಂಡಿದ್ದರು. ಆದರೆ ಇದೀಗ ಅವರೊಂದಿಗೆ ಸುಮಾರು 600 ಕಿಲೋ ಮೀಟರ್ ಕ್ರಮಿಸಿದೆ. ಪ್ರತಿ ದಿನ ಸುಮಾರು 40 ಕಿಮೀ ನಡೆಯುತ್ತಿರುವ ಶ್ವಾನವನ್ನು ಕಂಡು ಅಚ್ಚರಿ ಮೂಡಿದೆ.

ಹತ್ತು ಮಂದಿ ಮಾಲಾಧಾರಿಗಳ ತಂಡ ಮಂಗಳೂರು ಮೂಲಕ ರಾಜ್ಯದ ಗಡಿದಾಟಿ ಕೇರಳದ ಕಾಸರಗೋಡಿಗೆ ತಲುಪಿದ್ದಾರೆ. ಗುರು ಸ್ವಾಮಿಗಳು ಶ್ವಾನವನ್ನು ಓಡಿಸಿದರು ಸಹ ಅದು ಹೋಗಿಲ್ಲ. ಅದರಿಂದ ತಪ್ಪಿಸಿಕೊಂಡು ಹೋಗುವ ಯಾವ ಪ್ರಯತ್ನವು ಸಫಲವಾಗಿಲ್ಲ. ಅಯ್ಯಪ್ಪ ಮಾಲಾಧಾರಿಗಳು ನಡೆಯುವಾಗ ನಡೆಯುತ್ತದೆ.

ವಿಶ್ರಾಂತಿ ತೆಗೆದುಕೊಳ್ಳುವ ಸಂದರ್ಭದಲ್ಲಿ ಅದೂ ವಿಶ್ರಾಂತಿ ತೆಗೆದುಕೊಳ್ಳುತ್ತದೆ. ಅಯ್ಯಪ್ಪ ಸ್ವಾಮಿಗಳು ಪ್ರಯಾಣ ಮುಂದುವರಿಸಿದಾಗ ಅದೂ ಹಿಂಬಾಲಿಸುತ್ತದೆ ಎಂದು ಅಯ್ಯಪ್ಪ ಮಾಲಾಧಾರಿಗಳು ತಿಳಿಸಿದ್ದಾರೆ.

Related Posts

Scroll to Top