ಉಡುಪಿ : ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ ಆಯೋಜಿಸಿದ ಜಿಲ್ಲಾ ಮಟ್ಟದ ಪ್ರಶಿಕ್ಷಣ ವರ್ಗ ದ್ವಿತೀಯ ಭಾಷೆ ಇಂಗ್ಲೀಷ್ ಕಾರ್ಯಗಾರ ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಸ್ಕೂಲ್ ಕುತ್ಯಾರು ಇಲ್ಲಿ ನಡೆಯಿತು.
ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆಯ ಶೈಕ್ಷಣಿಕ ಸಂಯೋಜಿತ ಸಂಸ್ಥೆಯ ಶಿಕ್ಷಕರಿಗಾಗಿ ಆಯೋಜಿಸಿದ ಈ ಕಾರ್ಯಗಾರದಲ್ಲಿ 12 ಸಂಸ್ಥೆಗಳ ದ್ವಿತೀಯ ಭಾಷೆ ಇಂಗ್ಲಿಷ್ ನ 22 ಶಿಕ್ಷಕರು ಇದರ ಪ್ರಯೋಜನವನ್ನು ಪಡೆದರು.
ದ್ವಿತೀಯ ಭಾಷೆ ಇಂಗ್ಲಿಷ್ ಸಂಪನ್ಮೂಲ ವ್ಯಕ್ತಿಯಾಗಿ ಸವಿತಾ, ಸಮೂಹ ಸಂಪನ್ಮೂಲ ಶಿಕ್ಷಕರು ಕಾರ್ಕಡ ಬ್ರಹ್ಮಾವರ ವಲಯ ಇವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಕಾರ್ಯಗಾರವನ್ನು ನಡೆಸಿಕೊಟ್ಟರು.
ಶ್ರೀಕಾಂತ ಪ್ರಭು ಸದಸ್ಯರು ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ, ದೀಪ ಬೆಳಗಿಸುವುದರೊಂದಿಗೆ ಚಾಲನೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಶಾಲೆಯ ಆಡಳಿತ ಮಂಡಳಿ ಉಪಾಧ್ಯಕ್ಷರು ವಿವೇಕ್ ಆಚಾರ್ಯ, ದಿವಾಕರ ಆಚಾರ್ಯ ಶೈಕ್ಷಣಿಕ ಆಡಳಿತ ಅಧಿಕಾರಿ, ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಸ್ಕೂಲ್, ಸಂಗೀತ ಸಂಸ್ಥೆಯ ಮುಖ್ಯೋಪಾಧ್ಯಾಯನಿ ವಿದ್ಯಾಭಾರತಿ ಜಿಲ್ಲೆಯ ಕಾರ್ಯದರ್ಶಿ ಮಹೇಶ್ ಹೈಕಾಡಿ ಉಪಸ್ಥಿತರಿದ್ದರು.
ಶ್ರೀಕಾಂತ್ ಪ್ರಭು ಅವರು ಮಾತನಾಡಿ ತರಬೇತಿ ಶಿಕ್ಷಕರಿಗೆ ಅನಿವಾರ್ಯವಾಗಿದೆ ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಸಂತೋಷವನ್ನುಂಟು ಮಾಡಲು ವಿದ್ಯಾರ್ಥಿಗಳು ಸಂತೋಷದಾಯಕವಾಗಿ ಇರಲು ಶಿಕ್ಷಕರು ಸಂಪತ್ಭರಿತವಾಗಿರಬೇಕು ಎಂದರು.
ದಿವಾಕರಾಚಾರ್ಯ ಅವರು ಮಾತನಾಡಿ ತರಬೇತಿಯಿಂದ ಶಿಕ್ಷಕರು ಸಂಪನ್ಮೂಲ ವ್ಯಕ್ತಿಗಳಾಗಲು ಸಾಧ್ಯ. ತರಬೇತಿಯಿಂದ ಶಿಕ್ಷಕರು ಹಲವಾರು ವಿಧದ ಜ್ಞಾನವನ್ನು ಕೌಶಲವನ್ನು ಪಡೆಯುವುದಕ್ಕೆ ಸಾಧ್ಯ. ಶಿಕ್ಷಕರು ನಿರಂತರವಾಗಿ ತರಬೇತಿಯನ್ನು ಪಡೆಯುವುದರಿಂದ ಬೋಧನೆಯಲ್ಲಿ ಗುಣಮಟ್ಟವನ್ನ ಕಾಯ್ದುಕೊಳ್ಳುವಲ್ಲಿ ಸಾಧ್ಯವಾಗುತ್ತದೆ ಎಂದರು.
ಕಾರ್ಯಕ್ರಮದ ನಿರೂಪಣೆಯನ್ನು ರಮ್ಯ ಮಾಡಿದರು. ಶರೊನ್ ಧನ್ಯವಾದ ಮಾಡಿದರು. ಅನಿತಾ ಸ್ವಾಗತ ಮಾಡಿದರು. ಪ್ರಾಸ್ತಾವಿಕ ಕಾರ್ಯದರ್ಶಿ ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ ಮಹೇಶ್ ಹೈಕಾಡಿ ಮಾತನಾಡಿದರು.
ಕಾರ್ಯಾಗಾರದ ಸಮರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿರುವ ಆನೆಗುಂದಿ ಸರಸ್ವತಿ ಪೀಠ ಕಾರ್ಯದರ್ಶಿಗಳಾಗಿರುವ ಗುರುರಾಜ್ ಆಚಾರ್ಯ ಅವರು ಉಪಸ್ಥಿತರಿದ್ದು ಇಂಗ್ಲಿಷ್ ತರಬೇತಿಯ ಸಂಪನ್ಮೂಲ ವ್ಯಕ್ತಿ ಸವಿತಾ ಅವರಿಗೆ ಗೌರವ ಸ್ಮರಣೆಯನ್ನು ನೀಡಿ ಸತ್ಕರಿಸಿದರು.