ಉಡುಪಿ, ನ.30: ಉಡುಪಿ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಪರಮೇಶ್ವರ್ ಅನಂತ್ ಹೆಗ್ಡೆ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಈ ಹಿಂದೆ ಪರಮೇಶ್ವರ್ ಅನಂತ್ ಹೆಗ್ಡೆ ಅವರು ಮಂಗಳೂರಿನ ಸಿಸಿಬಿ ಘಟಕದ ಡಿವೈಎಸ್ಪಿಯಾಗಿ ಸೇವೆ ಸಲ್ಲಿಸುತ್ತಿದ್ದರು.
ಇನ್ನು 2021ರಲ್ಲಿ ಪರಮೇಶ್ವರ್ ಅನಂತ್ ಹೆಗ್ಡೆ ಅವರಿಗೆ ತನಿಖೆಯಲ್ಲಿನ ಶ್ರೇಷ್ಠತೆಗಾಗಿ ಪದಕವನ್ನು ನೀಡಿ ಗೌರವಿಸಲಾಗಿತ್ತು.