ಶೋಭಾ ಕರಂದ್ಲಾಜೆ, ರಾಜೀವ್ ಚಂದ್ರಶೇಖರ್ ಗೆ ಮೋದಿ ಸಂಪುಟದಲ್ಲಿ ಹೆಚ್ಚುವರಿ ಜವಾಬ್ದಾರಿ

ಕೇಂದ್ರ ಸಚಿವ ಸ್ಥಾನಕ್ಕೆ ನರೇಂದ್ರ ಸಿಂಗ್ ತೋಮರ್, ಪ್ರಹ್ಲಾದ್ ಸಿಂಗ್ ಪಟೇಲ್ ಮತ್ತು ರೇಣುಕಾ ಸಿಂಗ್ ಸಾರುತಾ ರಾಜೀನಾಮೆ ನೀಡಿದ್ದಾರೆ. ಬೆನ್ನಲ್ಲೇ ಶೋಭಾ ಕರಂದ್ಲಾಜೆ ಸೇರಿ ನಾಲ್ವರು ಕೇಂದ್ರ ಸಚಿವರಿಗೆ ಹೆಚ್ಚುವರಿ ಖಾತೆಗಳ ಜವಾಬ್ದಾರಿ ನೀಡಲಾಗಿದೆ.

ಪಂಚ ರಾಜ್ಯಗಳ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಇವರು ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ತಮ್ಮ ಸಂಸತ್ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ರಾಜೀನಾಮೆಯನ್ನು ಅಂಗೀಕಾರ ಮಾಡಿದ್ದಾರೆ.

ತೋಮರ್ ಕಾರ್ಯ ನಿರ್ವಹಿಸುತ್ತಿದ್ದ ಕೃಷಿ ಇಲಾಖೆಯ ಜವಾಬ್ದಾರಿಯನ್ನು ಅರ್ಜುನ್ ಮುಂಡಾಗೆ ಹೆಚ್ಚುವರಿಯಾಗಿ ನೀಡಲಾಗಿದೆ. ರಾಜೀವ್ ಚಂದ್ರಶೇಖರ್ಗೆ ಕೇಂದ್ರ ಜಲಶಕ್ತಿ ರಾಜ್ಯ ಸಚಿವ ಸ್ಥಾನದ ಹೊಣೆ ಹಂಚಲಾಗಿದೆ. ಶೋಭಾ ಕರಂದ್ಲಾಜೆಗೂ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದ್ದು, ಆಹಾರ ಸಂಸ್ಕರಣೆ ಕೈಗಾರಿಕೆಯ ರಾಜ್ಯ ಖಾತೆಯ ಹೊಣೆ ನಿಭಾಯಿಸಬೇಕಿದೆ. ಪ್ರಸ್ತುತ ಶೋಭಾ ಕರಂದ್ಲಾಜೆ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆ ಸಚಿವರಾಗಿ ಕರ್ತವ್ಯ ನಿಭಾಯಿಸುತ್ತಿದ್ದರು. ಇದೀಗ ಹೆಚ್ಚುವರಿಯಾಗಿ ಮತ್ತೊಂದು ಖಾತೆ ಬಂದಿದೆ.

ನರೇಂದ್ರ ಸಿಂಗ್ ತೋಮರ್, ಪ್ರಹ್ಲಾದ್ ಸಿಂಗ್ ಪಟೇಲ್ ಅವರು ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ರೇಣುಕಾ ಸಿಂಗ್ ಸಾರುತಾ ಅವರು ಛತ್ತೀಸ್ಗಢ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ.

Scroll to Top