ಬೆಚ್ಚ ಬೆಚ್ಚ ನ್ಯೂಸ್
15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು!
ಪುತ್ತೂರು : ಮುಸ್ಲಿಂ ಯುವತಿಗೆ ಚೂರಿ ಇರಿದ ಹಿಂದೂ ಯುವಕ : ಆಸ್ಪತ್ರೆಗೆ ದಾಖಲು!
ಬಟ್ಟೆ ಕೊಳ್ಳುವ ವಿಚಾರಕ್ಕೆ ಪತಿ-ಪತ್ನಿ ನಡುವೆ ಜಗಳ : ಕೊಲೆಯಲ್ಲಿ ಗಲಾಟೆ ಅಂತ್ಯ
ಶಿರ್ವ: ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಸಂಸ್ಥಾಪಕ ಗೇಬ್ರಿಯಲ್ ನಜರೆತ್ ನಿಧನ
ಅಧಿಕ ಲಾಭಾಂಶ ಆಮಿಷ ; ಹಿರಿಯ ನಾಗರಿಕರಿಗೆ ಲಕ್ಷಾಂತರ ರೂ.ವಂಚನೆ
ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಖಂಡಿಸಿ ಮೆರವಣಿಗೆ, ಮುಷ್ಕರ
ಸೂಡ ಶ್ರೀ ಸುಬ್ರಹ್ಮಣ್ಯ ಕುಣಿತ ಭಜನಾ ಮಂಡಳಿ ಉದ್ಘಾಟನಾ ಸಮಾರಂಭ
ತಂದೆಯನ್ನು ಆಸ್ಪತ್ರೆಗೆ ಸೇರಿಸಿ ಕಾರಿನಲ್ಲಿ ಎಸಿ ಹಾಕಿ ಮಲಗಿದ್ದ ಮಗ ಸಾವು
ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿ
ಮುಳುವಾದ ಸೌಂದರ್ಯ… ಪತ್ನಿ ನೋಡಲು ಸುಂದರವಾಗಿದ್ದಾಳೆಂದು ಆಕೆಯ ಕಥೆಯನ್ನೇ ಮುಗಿಸಿದ ಪತಿರಾಯ
Next
Prev

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಐವರು ಸೇರಿ 24 ವಾಂಟೆಡ್ ಆರೋಪಿಗಳ ಹೆಸರು ಪ್ರಕಟಿಸಿದ ಎನ್ಐಎ

ಬೆಂಗಳೂರು : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಐವರು ಆರೋಪಿಗಳು ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿರುವ ಆರೋಪಿಗಳ ಪಟ್ಟಿಯನ್ನು ಎನ್ಐಎ ಬಿಡುಗಡೆ ಮಾಡಿದೆ. ಈ ಎಲ್ಲಾ ಆರೋಪಿಗಳು ನಿಷೇಧಿತ ಪಿಎಫ್ಐ ಪ್ರಕರಣಗಳು, ಕೊಲೆ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಭಾಗಿಯಾದವರಾಗಿದ್ದಾರೆ.

ಕೇರಳದ 11 ಆರೋಪಿಗಳು, ಆಂಧ್ರಪ್ರದೇಶ ಹಾಗೂ ತೆಲಂಗಾಣದ ಮೂವರು, ಕರ್ನಾಟಕ ಹಾಗೂ ತಮಿಳುನಾಡಿನ ಐವರು ಆರೋಪಿಗಳ ಹೆಸರು ಪ್ರಕಟಿಸಲಾಗಿದೆ.

ಆರೋಪಿಗಳ ಹೆಸರು, ಭಾವಚಿತ್ರ, ವಿಳಾಸ ಸಹಿತ ಮಾಹಿತಿ ಪ್ರಕಟಿಸಿ ಸುಳಿವು ಸಿಕ್ಕಲ್ಲಿ ಎನ್ಐಎಗೆ ವಾಟ್ಸ್ಆ್ಯಪ್ ಅಥವಾ ದೂರವಾಣಿ ಕರೆ ಮೂಲಕ ಮಾಹಿತಿ ನೀಡುವಂತೆ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ‌ ಮಾಡಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿರುವ ಬೆಳ್ಳಾರೆ ಮುಸ್ತಫಾ, ಮಸೂಧ್ ಅಗ್ನಾಡಿ, ಮೊಹಮ್ಮದ್ ಷರೀಫ್ ಕೊಡಾಜೆ, ಉಮ್ಮರ್ ಅಲಿಯಾಸ್ ಉಮರ್ ಫಾರೂಕ್, ಅಬೂಬ್ಬಕ್ಕರ್ ಸಿದ್ದಿಕ್ ಹೆಸರು ಪ್ರಕಟಿಸಲಾಗಿದೆ.

ಕುಂಭಕೋಣಂ ರಾಮಲಿಂಗಂ ಕೊಲೆ ಕೇಸ್ನಲ್ಲಿ ಭಾಗಿಯಾಗಿದ್ದ ತಮಿಳುನಾಡಿನ ಐವರು ಹಾಗೂ ಪಾಲಕ್ಕಾಡ್ ಶ್ರೀನಿವಾಸ್ ಕೇಸ್ನಲ್ಲಿ ಭಾಗಿಯಾಗಿದ್ದ ಕೇರಳದ ಅಬ್ದುಲ್ ವಹಾಬ್, ಅಬ್ದುಲ್ ರಷೀದ್‌, ಆಯೂಬ್ ಸೇರಿ ನಾಲ್ವರು ಆರೋಪಿಗಳ ಹೆಸರು ಪ್ರಕಟಿಸಲಾಗಿದೆ.

ನಿಷೇಧಿತ ಪಿಎಫ್ಐಗೆ ನೇಮಕ, ಒಳಸಂಚು, ಸರ್ಕಾರದ ವಿರುದ್ಧ ಪಿತೂರಿ, ದೇಶದ ಸಮಗ್ರತೆ, ಏಕತೆಗೆ ಧಕ್ಕೆ ತರಲು ಆರೋಪಿಗಳು ಯತ್ನಿಸಿದ ಆರೋಪ ಇವರ ಮೇಲಿದೆ. ಸದ್ಯ ತಲೆಮರೆಸಿಕೊಂಡಿರುವ ಆರೋಪಿಗಳ ಮಾಹಿತಿಗಳನ್ನು ಎನ್ಐಎ ಅಧಿಕಾರಿಗಳು ಸಂಗ್ರಹಿಸುತ್ತಿದ್ದಾರೆ.

Related Posts

Scroll to Top