ಮಂಗಳೂರು : ಕೊರೊನಾ ಪ್ರಕರಣಗಳು ಏರಿಕೆಯಲ್ಲಿದ್ದು, ಇದೀಗ ರಾಜ್ಯ ಸರಕಾರದ ಆದೇಶದಂತೆ ದಕ್ಷಿಣಕನ್ನಡ ಜಿಲ್ಲಾಡಳಿತ ಕೊರೊನಾ ಪರೀಕ್ಷೆಯನ್ನು ಪ್ರಾರಂಭಿಸಿದ್ದು, ಮೊದಲ ದಿನವೇ ಒಂದು ಕೊರೊನಾ ಪ್ರಕರಣ ಪತ್ತೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಬುಧವಾರದಿಂದಷ್ಟೆ ಕೊರೊನಾ ತಪಾಸಣೆ ಆರಂಭಿಸಿತ್ತು. ಮೊದಲ ದಿನವೆ ಒಂದು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.
ಉಡುಪಿ ಜಿಲ್ಲೆಯ 82 ವರ್ಷದ ವೃದ್ದರೊಬ್ಬರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಕೊರೊನಾ ತಪಾಸಣೆ ನಡೆಸಿದಾಗ ಪಾಸಿಟಿವ್ ಬಂದಿದೆ.
ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್.ಆರ್ ತಿಮ್ಮಯ್ಯ ಮಾತನಾಡಿ, ಉಡುಪಿ ಜಿಲ್ಲೆಯ ವ್ಯಕ್ತಿಯೊಬ್ಬರು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದು, ಅವರಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಅವರಿಗೆ ಆಸ್ಪತ್ರೆಯಲ್ಲಿ ಐಸೋಲೇಸನ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಉಡುಪಿ ಜಿಲ್ಲೆಯ ಆರೋಗ್ಯ ಇಲಾಖೆಗೆ ಈ ಬಗ್ಗೆ ಮಾಹಿತಿ ನೀಡಲಾಗಿದೆ ಎಂದರು.